Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

ಈ ಬಾರಿ ಮೋದಿ ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಗಳು ಹಾಗೂ ವಿರೋಧ ಪಕ್ಷಗಳ ನಾಯಕರಿಗೆ ಬೆದರಿಕೆಗಳನ್ನು ಹಾಕಿ ಆಡಳಿತ ನಡೆಸುತ್ತಿದೆ. ರಾಜಕೀಯ ವಿರೋಧಿಗಳನ್ನು ಮಣಿಸಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಅವುಗಳ ಸಿದ್ಧಾಂತ ವಿಷವಿದ್ದಂತೆ. ಆದುದರಿಂದ ಅವುಗಳಿಂದ ದೂರವಿರುವಂತೆ ಅವರು ಜನರನ್ನು ಆಗ್ರಹಿಸಿದರು.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರವಿವಾರ ಕಾಂಗ್ರೆಸ್ ತ್ಯಜಿಸಿ ಎನ್‌ಡಿಎ ಗೆ ಮರಳಿರುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಓರ್ವ ವ್ಯಕ್ತಿ ಮಹಾಘಟಬಂದನ್ ತೊರೆದರೆ, ಅದೇನು ದುರ್ಬಲ ಆಗುವುದಿಲ್ಲ. ಮಹಾಘಟಬಂದನ್ ತ್ಯಜಿಸಿ ಎನ್‌ಡಿಎ ಸೇರಿರುವುದು ಪೂರ್ವ ಯೋಜಿತ ಎಂದು ಖರ್ಗೆ ಹೇಳಿದ್ದಾರೆ.

ಇಂತಹ ನಿರ್ಧಾರವನ್ನು ಇಷ್ಟು ತುರ್ತಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದು ಪೂರ್ವ ಯೋಜಿತ ಎಂಬುದನ್ನು ತೋರಿಸುತ್ತದೆ. ಇಂಡಿಯಾ ಮೈತ್ರಿಕೂಟವನ್ನು ಒಡೆಯಲು ಬಿಜೆಪಿ ಹಾಗೂ ಜೆಡಿಯು ಈ ಎಲ್ಲಾ ಯೋಜನೆಗಳನ್ನು ರೂಪಿಸಿದೆ. ಅವರು (ನಿತೀಶ್ ಕುಮಾ‌ರ್ ನಮ್ಮನ್ನು ಕತ್ತಲೆಯಲ್ಲಿ ಇರಿಸಿದ್ದರು. ಅವರು ಲಾಲು ಯಾದವ್ ಅವರನ್ನೂ ಕತ್ತಲೆಯಲ್ಲಿ ಇರಿಸಿದ್ದರು ಎಂದು ಹೇಳಿದ ಖರ್ಗೆ, ನಾವು ಬಿಜೆಪಿಯನ್ನು ಸೋಲಿಸಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ