ನವದೆಹಲಿ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಕ್ಕೆ ಆದ್ಯತೆ ನೀಡಬಹುದು. ಮೋದಿ ಅವರು ಗೆದ್ದಲ್ಲಿ ಚುನಾವಣೆಯೇ ಇರುವುದಿಲ್ಲ, ಆದುದರಿಂದ 2024ರ ಲೋಕಸಭಾ ಚುನಾವಣೆ ಪ್ರಜಾಪ್ರಭುತ್ವವನ್ನು ಉಳಿಸಲು ಜನರಿಗಿರುವ ಕೊನೆಯ ಅವಕಾಶ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜ್ಯಗಳು ಹಾಗೂ ವಿರೋಧ ಪಕ್ಷಗಳ ನಾಯಕರಿಗೆ ಬೆದರಿಕೆಗಳನ್ನು ಹಾಕಿ ಆಡಳಿತ ನಡೆಸುತ್ತಿದೆ. ರಾಜಕೀಯ ವಿರೋಧಿಗಳನ್ನು ಮಣಿಸಲು ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯನ್ನು ಅಸ್ತ್ರವಾಗಿ ಬಳಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಅವುಗಳ ಸಿದ್ಧಾಂತ ವಿಷವಿದ್ದಂತೆ. ಆದುದರಿಂದ ಅವುಗಳಿಂದ ದೂರವಿರುವಂತೆ ಅವರು ಜನರನ್ನು ಆಗ್ರಹಿಸಿದರು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ರವಿವಾರ ಕಾಂಗ್ರೆಸ್ ತ್ಯಜಿಸಿ ಎನ್‌ಡಿಎ ಗೆ ಮರಳಿರುವ ಕುರಿತು ಪ್ರತಿಕ್ರಿಯಿಸಿದ ಖರ್ಗೆ, ಓರ್ವ ವ್ಯಕ್ತಿ ಮಹಾಘಟಬಂದನ್ ತೊರೆದರೆ, ಅದೇನು ದುರ್ಬಲ ಆಗುವುದಿಲ್ಲ. ಮಹಾಘಟಬಂದನ್ ತ್ಯಜಿಸಿ ಎನ್‌ಡಿಎ ಸೇರಿರುವುದು ಪೂರ್ವ ಯೋಜಿತ ಎಂದು ಖರ್ಗೆ ಹೇಳಿದ್ದಾರೆ.
ಇಂತಹ ನಿರ್ಧಾರವನ್ನು ಇಷ್ಟು ತುರ್ತಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದು ಪೂರ್ವ ಯೋಜಿತ ಎಂಬುದನ್ನು ತೋರಿಸುತ್ತದೆ. ಇಂಡಿಯಾ ಮೈತ್ರಿಕೂಟವನ್ನು ಒಡೆಯಲು ಬಿಜೆಪಿ ಹಾಗೂ ಜೆಡಿಯು ಈ ಎಲ್ಲಾ ಯೋಜನೆಗಳನ್ನು ರೂಪಿಸಿದೆ. ಅವರು (ನಿತೀಶ್ ಕುಮಾರ್ ನಮ್ಮನ್ನು ಕತ್ತಲೆಯಲ್ಲಿ ಇರಿಸಿದ್ದರು. ಅವರು ಲಾಲು ಯಾದವ್ ಅವರನ್ನೂ ಕತ್ತಲೆಯಲ್ಲಿ ಇರಿಸಿದ್ದರು ಎಂದು ಹೇಳಿದ ಖರ್ಗೆ, ನಾವು ಬಿಜೆಪಿಯನ್ನು ಸೋಲಿಸಿಯೇ ತೀರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ: ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಇಂದು ಸಿಇಟಿ ಪರೀಕ್ಷೆ ಹಿನ್ನೆಲೆ ರಾಜ್ಯ ಸರ್ಕಾರದ ವಸ್ತ್ರ ಸಂಹಿತೆ ಕಡ್ಡಾಯವಾಗಿ ಜಾರಿಗೊಂಡಿದೆ. ಪರೀಕ್ಷೆಗೆ…
ಮೈಸೂರು: ಮೈಸೂರಿನಲ್ಲಿ ಮೀನು ಮಾರಾಟ ಮಳಿಗೆಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಅಂಗಡಿ ಸಾಮಾಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ…
ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಪೊನ್ನಂಪೇಟೆ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಕುಟ್ಟ ಗ್ರಾಮದಲ್ಲಿ ವಿದೇಶಿ ಮಹಿಳೆ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟ್ಟ ಖಾಸಗಿ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಇರುವೆ ಕಚ್ಚಿ ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಲಕ್ಷ್ಮಿಕಾಂತ್…
ಸಮರ್ಪಕ ರಸ್ತೆ ಇಲ್ಲ, ವಾಹನ ಸೌಲಭ್ಯವಿಲ್ಲ, ಶುದ್ಧ ನೀರಿಗೂ ತತ್ವಾರ; ಗ್ರಾಮಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ ಮಹಾದೇಶ್ ಎಂ.ಗೌಡ ಹನೂರು:…