ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ , ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಮಂದಿರದ ಮುಖ್ಯ ಅರ್ಚಕ ಈ ಸಂದರ್ಭದಲ್ಲಿ ಇರಲಿದ್ದಾರೆ.
ಪ್ರಾಣ ಪ್ರತಿಷ್ಠೆ ನಡೆಯುವ ಸಂದರ್ಭದಲ್ಲಿ ಪರದೆಯನ್ನು ಹಾಕಲು ತೀರ್ಮಾನಿಸಲಾಗಿದೆ.
ಈ ಐವರ ಸಮ್ಮುಖದಲ್ಲಿಯೇ ಪ್ರತಿಷ್ಠಾಪನೆ ಮಾಡಲಾಗುವ ರಾಮ ಲಲ್ಲಾನ ವಿಗ್ರಹವನ್ನು ತೆರೆಯಲಾಗುತ್ತದೆ. ಧಾರ್ಮಿಕ ವಿಧಿ ವಿಧಾನಗಳ ಅನ್ವಯ ವಿಗ್ರಹಕ್ಕೆ ಮೊದಲು ಕನ್ನಡಿ ತೋರಿಸಲಾಗುತ್ತದೆ. ನಂತರ ಮೂವರು ಆಚಾರ್ಯರ ನೇತೃತ್ವದ ತಂಡ ದಾಲ್ ಪೂಜೆಯನ್ನು ನಡೆಸಿಕೊಡಲಿದೆ.
ಮೊದಲ ತಂಡದ ನೇತೃತ್ವವನ್ನು ಸ್ವಾಮಿ ಗೋವಿಂದ ದೇವ್ ಗಿರಿ, 2ನೇ ತಂಡವನ್ನು ಕಾಂಚಿ ಕಾಮಕೋಟಿ ಪೀಠದ ವಿಜಯೇಂದ್ರ ಸರಸ್ವತಿ ಸ್ವಾಮೀಜಿಗಳು , ಮೂರನೇ ತಂಡ ಕಾಶಿಯಲ್ಲಿರುವ 21 ಮಂದಿ ಧಾರ್ಮಿಕ ವಿದ್ವಾಂಸರ ತಂಡ ನಡೆಸಿಕೊಡಲಿದೆ.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…