ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಮಂದಿರದಲ್ಲಿ ರಾಮಲಲ್ಲಾನ ಮಹಾಮಸ್ತಕಾಭಿಷೇಕ ಸೇರಿದಂತೆ ಇಂದಿನಿಂದ ಏಳು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಜನವರಿ 22ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 2020 ಆಗಸ್ಟ್ 5 ರಂದು ಭವ್ಯವಾದ ರಾಮಮಂದಿರದ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಇದೇ ಜನವರಿ 22ರಂದು ರಾಮಮಂದಿರ ಉದ್ಘಾಟನೆ ಆಗಲಿದೆ
ದೇವಾಲಯದ ಟ್ರಸ್ಟ್‌ನಿಂದ 7,000 ಕ್ಕೂ ಹೆಚ್ಚು ಜನರನ್ನು ಆಹ್ವಾನಿಸಲಾಗಿದೆ. ಅವರಲ್ಲಿ ಕ್ರಿಕೆಟ್ ಲೆಜೆಂಡ್ಸ್‌ಗಳಾದ ಸಚಿನ್ ತೆಂಡೂಲ್ಕರ್ ಮತ್ತು ಮಹೇಂದ್ರ ಸಿಂಗ್ ಧೋನಿ, ಸೂಪರ್‌ಸ್ಟಾರ್ ರಜನಿಕಾಂತ್, ಪ್ರಭಾಸ್ ಸೇರಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳಲಿರುವ ಅದ್ಧೂರಿ ಸಮಾರಂಭಕ್ಕೆ ನಗರ ಅಯೋಧ್ಯೆ ಸಜ್ಜಾಗುತ್ತಿದೆ.
ಜನವರಿ 16 ರಿಂದ 22 ರ ವರೆಗೆ ನಡೆಯುವ ಕಾರ್ಯಕ್ರಮಗಳ ವಿವರ:
ಜನವರಿ 16: ಮಹಾಮಸ್ತಕಾಭಿಷೇಕದ ವಿಧಿವಿಧಾನಗಳು ಇಂದಿನಿಂದ ಆರಂಭವಾಗಲಿವೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ದೇವಸ್ಥಾನದ ಟ್ರಸ್ಟ್ ನೇಮಿಸಿದ ಆತಿಥೇಯರು ಪ್ರಾಯಶ್ಚಿತ್ತ ಸಮಾರಂಭವನ್ನು ನಡೆಸಲಿದ್ದಾರೆ. ಸರಯೂ ನದಿಯ ದಡದಲ್ಲಿ ‘ದಶವಿಧ’ ಸ್ನಾನ, ವಿಷ್ಣು ಪೂಜೆ ನಡೆಯಲಿದೆ.
ಜನವರಿ 17: ರಾಮಲಲ್ಲಾ ಮೂರ್ತಿಯನ್ನು ಹೊತ್ತ ಮೆರವಣಿಗೆ ಅಯೋಧ್ಯೆಗೆ ತಲುಪಲಿದೆ. ಮಂಗಳ ಕಲಶದಲ್ಲಿ ಸರಯು ಜಲವನ್ನು ಹೊತ್ತ ಭಕ್ತರು ರಾಮಜನ್ಮಭೂಮಿ ದೇವಸ್ಥಾನವನ್ನು ತಲುಪಲಿದ್ದಾರೆ.
ಜನವರಿ 18: ಗಣೇಶ ಅಂಬಿಕಾ ಪೂಜೆ, ವರುಣ ಪೂಜೆ, ಮಾತೃಕಾ ಪೂಜೆ, ಬ್ರಾಹ್ಮಣ ವರಣ ಮತ್ತು ವಾಸ್ತು ಪೂಜೆಯೊಂದಿಗೆ ಔಪಚಾರಿಕ ಆಚರಣೆಗಳು ಪ್ರಾರಂಭವಾಗುತ್ತವೆ.
ಜನವರಿ 19: ಪವಿತ್ರ ಅಗ್ನಿಯನ್ನು ಬೆಳಗಿಸಲಾಗುತ್ತದೆ. ನಂತರ ‘ನವಗ್ರಹ’ ಮತ್ತು ‘ಹವನ’ (ಬೆಂಕಿಯ ಸುತ್ತಲಿನ ಪವಿತ್ರ ಆಚರಣೆ) ಸ್ಥಾಪನೆಯಾಗುತ್ತದೆ.
ಜನವರಿ 20: ಜನವರಿ 20 ರಂದು ರಾಮ ಜನ್ಮಭೂಮಿ ದೇವಸ್ಥಾನದ ಗರ್ಭಗುಡಿಯನ್ನು ಸರಯು ನದಿ ನೀರಿನಿಂದ ತೊಳೆಯಲಾಗುತ್ತದೆ. ನಂತರ ವಾಸ್ತು ಶಾಂತಿ ಮತ್ತು ‘ಅನ್ನಾಧಿವಾಸ್’ ಆಚರಣೆಗಳು ನಡೆಯುತ್ತವೆ.
ಜನವರಿ 21: ರಾಮಲಲ್ಲಾ ವಿಗ್ರಹಕ್ಕೆ 125 ಕಲಶಗಳಲ್ಲಿ ಸ್ನಾನ ಮಾಡಿಸಲಾಗುವುದು. ನಂತರ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗುವುದು.
ಜನವರಿ 22: ಕಾರ್ಯಕ್ರಮಕ್ಕಾಗಿ ಆಹ್ವಾನಿತರೊಂದಿಗೆ 100 ಕ್ಕೂ ಹೆಚ್ಚು ಚಾರ್ಟರ್ಡ್ ಜೆಟ್‌ಗಳು ಅಯೋಧ್ಯೆಗೆ ಬಂದಿಳಿಯಲಿವೆ. ಅಂತಿಮ ದಿನದ ಸಮಾರಂಭದಲ್ಲಿ 150 ದೇಶಗಳ ಭಕ್ತರು ಅಯೋಧ್ಯೆ ‘ಪ್ರಾಣ ಪ್ರತಿಷ್ಠೆ’ಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಧ್ಯಾಹ್ನ 12:30 ರಿಂದ 1 ಗಂಟೆಯ ವರೆಗೆ ‘ಪ್ರಾಣ ಪ್ರತಿಷ್ಠೆ’ ಸಮಾರಂಭ ನಡೆಯಲಿದ್ದು, ರಾಮಲಲ್ಲಾ ದೇವರ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ.
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…
ಬೆಂಗಳೂರು : ಹಬ್ಬ-ಹರಿದಿನಗಳನ್ನೂ ಲೆಕ್ಕಿಸದೆ ಜನರಿಗಾಗಿ ದುಡಿಯುವ ಪೊಲೀಸರಿಗೆ ಕರ್ನಾಟಕ ಪೊಲೀಸ್ ಇಲಾಖೆ ಸಿಹಿಸುದ್ದಿ ನೀಡಿದ್ದು, ಜನ್ಮದಿನ ಮತ್ತು ವಿವಾಹ…
ಹೊಸದಿಲ್ಲಿ : ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು…
ಮೈಸೂರು : ಮುಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಮತ್ತು ಇತರರ ಮೇಲೆ ಬಿ ರಿಪೋರ್ಟ್…