ನವದೆಹಲಿ: ಪ್ರಮುಖ ನಾಯಕರು ಭಾಗವಹಿಸಲು ಸಾಧ್ಯವಾಗದ ಕಾರಣ ಇಂದು ನಿಗದಿಯಾಗಿದ್ದ ‘ಇಂಡಿಯಾ’ ಮೈತ್ರಿಕೂಟದ ಸಭೆಯನ್ನು ಮುಂದೂಡಲಾಗಿದೆ.
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಇಂಡಿಯಾ’ ಮೈತ್ರಿಕೂಟದ ನಾಯಕರನ್ನು ಆಹ್ವಾನಿಸಿ ಸಭೆ ನಡೆಸಲು ಮುಂದಾಗಿದ್ದರು.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಸಮಾಜವಾದಿ ಪಕ್ಷ ಸೇರಿದಂತೆ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲು ಆಗುವುದಿಲ್ಲ ಎಂದು ತಿಳಿಸಿದ್ದಾರೆ.
ಹೀಗಾಗಿ ಸಭೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಎರಡು ವಾರಗಳ ನಂತರ ಸಭೆ ನಡೆಸಲಾಗುವುದು ಎಂದು ಹೇಳಲಾಗಿದೆ.