ಒಂದೇ ದಿನ 2,68,833 ಕೊರೋನಾ ಪ್ರಕರಣಗಳು ಪತ್ತೆ; 6,401ಕ್ಕೇರಿದ ಓಮಿಕ್ರಾನ್ ಪ್ರಕರಣಗಳು

ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳಲ್ಲಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 2,68,833 ಪ್ರಕರಣಗಳು ವರದಿಯಾಗಿವೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಬಿಡುಗಡೆ ಮಾಡಿರುವ ಮಾಹಿತಿಯಲ್ಲಿ ಈ ಅಂಕಿಅಂಶಗಳನ್ನು ನೀಡಲಾಗಿದೆ. ಶುಕ್ರವಾರಕ್ಕಿಂತ 4,631 ಹೆಚ್ಚು ಪ್ರಕರಣಗಳು ದೇಶದಲ್ಲಿ ಕಂಡುಬಂದಿವೆ. ಈ ಮೂಲಕ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 14,17,820ಕ್ಕೆ ಏರಿದೆ. ದೈನಂದಿನ ಪಾಸಿಟಿವಿಟಿ ದರವು ಶೇ.16.66 ಇದೆ. ಕಳೆದ 24 ಗಂಟೆಗಳಲ್ಲಿ 402 ಕೊವಿಡ್ ಸೋಂಕಿತರು ನಿಧನ ಹೊಂದಿದ್ದಾರೆ. ಈ ಮೂಲಕ ದೇಶದಲ್ಲಿ ಕೊವಿಡ್​​ನಿಂದ ನಿಧನ ಹೊಂದಿದವರ ಸಂಖ್ಯೆ 8,85,752ಕ್ಕೆ ತಲುಪಿದೆ. ಕಳೆದ ಒಂದು ದಿನದ ಅವಧಿಯಲ್ಲಿ 1,22,684 ರೋಗಿಗಳು ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಮಿಕ್ರಾನ್ ಪ್ರಕರಣಗಳಲ್ಲೂ ಏರಿಕೆಯಾಗಿದ್ದು, ದೇಶದಲ್ಲಿ ಇದುವರೆಗೆ ಒಟ್ಟು 6,401 ಪ್ರಕರಣಗಳು ದೃಢಪಟ್ಟಿವೆ.

ದೇಶದಲ್ಲಿ ಕಳೆದ ವರ್ಷ ಇದೇ ಸಮಯದಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇಲ್ಲಿಯವರೆಗೆ ಒಟ್ಟು 156.02 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ತನ್ನ ಮಾಹಿತಿಯಲ್ಲಿ ತಿಳಿಸಿದೆ. ದೇಶದಲ್ಲಿ ಇದುವರೆಗೆ ಸೋಂಕು ಪತ್ತೆಗೆ ಒಟ್ಟು 70.07 ಕೋಟಿ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 16,13,70 ಮಾದರಿ ಪರೀಕ್ಷಿಸಲಾಗಿದೆ.

× Chat with us