ನವದೆಹಲಿ: ವೈದ್ಯಕೀಯ ಕಾರಣಗಳಿಗಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಆರೋಗ್ಯ ಸಚಿವ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದೆ.
ಸುಪ್ರೀಂ ಕೋರ್ಟ್ ನೀಡಿರುವ ಷರತ್ತುಬದ್ಧ ಜಾಮೀನು ಪ್ರಕಾರ, ಸತ್ಯೇಂದ್ರ ಜೈನ್ ದೆಹಲಿ ತೊರೆದು ಹೋಗುವಂತಿಲ್ಲ, ಮಾಧ್ಯಮಗಳ ಮುಂದೆ ಯಾವುದೇ ರೀತಿಯ ಹೇಳಿಕೆ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಕಳೆದ ವರ್ಷ ಮೇ ತಿಂಗಳಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸತ್ಯೇಂದರ್ ಜೈನ್ ಅವರನ್ನು ಬಂಧಿಸಿತ್ತು.
ತಲೆಸುತ್ತಿ ಬಂದು ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದ ನಂತರ ಜೈಲಿನಲ್ಲಿರುವ ಆಪ್ ನಾಯಕ ಸತ್ಯೇಂದ್ರ ಜೈನ್ ನನ್ನು ನಿನ್ನೆ ದೆಹಲಿಯ ಸರ್ಕಾರಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿತ್ತು.