Mysore
18
few clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

ಸರ್ಕಾರಿ ಹುದ್ದೆ ನೇಮಕ ಪರೀಕ್ಷೆಯಲ್ಲಿ ಅಕ್ರಮ : 1ಕೋಟಿ ದಂಡ-10ವರ್ಷ ಜೈಲು !

ನವದೆಹಲಿ : ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷೆ ಅಕ್ರಮ ತಡೆ ಮಸೂದೆಯನ್ನು ಮಂಡಿಸಲಿದೆ.

ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷ ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡವಿಧಿಸಲು ಅವಕಾಶವಿರುವಂತೆ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಸಾರ್ವಜನಿಕ ಪರೀಕ್ಷೆಅಕ್ರಮ ತಡೆ ಮಸೂದೆಯನ್ನು ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದೆ. ಇದರಲ್ಲಿ, ಆರೋಪಿಗಳು, ಸಂಸ್ಥೆ ಮತ್ತು ಮಾಫಿಯಾ ವಿರುದ್ಧ ಕಠಿಣ ನಿಬಂಧನೆಗಳನ್ನು ಮಾಡಲಾಗಿದೆ.

ಇದರ ಅಡಿಯಲ್ಲಿ, ಹತ್ತು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಬಹುದು. 2024 ರ ಜನವರಿ 31 ರಂದು ರಾಷ್ಟ್ರಪತಿ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದು, ಇಂದಿನ ಸದನಕ್ಕೆ ಹಾಜರಾಗುವಂತೆ ಭಾರತೀಯ ಜನತಾ ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಅನ್ನು ಭಾನುವಾರ ಜಾರಿ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!