ನವದೆಹಲಿ : ಸರ್ಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆ ಅಕ್ರಮ ತಡೆಗೆ ಕೇಂದ್ರ ಸರ್ಕಾರವು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಲೋಕಸಭೆಯಲ್ಲಿ ಇಂದು ಪರೀಕ್ಷೆ ಅಕ್ರಮ ತಡೆ ಮಸೂದೆಯನ್ನು ಮಂಡಿಸಲಿದೆ.
ಕೇಂದ್ರ ಸರ್ಕಾರಿ ಹುದ್ದೆಗಳಿಗೆ ನಡೆಯುವ ನೇಮಕಾತಿ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಗರಿಷ್ಠ 10 ವರ್ಷ ಶಿಕ್ಷೆ ಮತ್ತು ಕನಿಷ್ಠ 1 ಕೋಟಿ ರೂ. ದಂಡವಿಧಿಸಲು ಅವಕಾಶವಿರುವಂತೆ ಕಾಯ್ದೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಸಾರ್ವಜನಿಕ ಪರೀಕ್ಷೆಅಕ್ರಮ ತಡೆ ಮಸೂದೆಯನ್ನು ಸರ್ಕಾರ ಸೋಮವಾರ ಲೋಕಸಭೆಯಲ್ಲಿ ಮಂಡಿಸಲಿದೆ. ಇದರಲ್ಲಿ, ಆರೋಪಿಗಳು, ಸಂಸ್ಥೆ ಮತ್ತು ಮಾಫಿಯಾ ವಿರುದ್ಧ ಕಠಿಣ ನಿಬಂಧನೆಗಳನ್ನು ಮಾಡಲಾಗಿದೆ.
ಇದರ ಅಡಿಯಲ್ಲಿ, ಹತ್ತು ವರ್ಷಗಳ ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿಗಳವರೆಗೆ ದಂಡ ವಿಧಿಸಬಹುದು. 2024 ರ ಜನವರಿ 31 ರಂದು ರಾಷ್ಟ್ರಪತಿ ಭಾಷಣದ ಮೇಲಿನ ಧನ್ಯವಾದ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದು, ಇಂದಿನ ಸದನಕ್ಕೆ ಹಾಜರಾಗುವಂತೆ ಭಾರತೀಯ ಜನತಾ ಪಕ್ಷವು ತನ್ನ ಲೋಕಸಭಾ ಸಂಸದರಿಗೆ ಮೂರು ಸಾಲಿನ ವಿಪ್ ಅನ್ನು ಭಾನುವಾರ ಜಾರಿ ಮಾಡಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…