ಬೆಂಗಳೂರು : ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆಯ ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.
ವಿವಾದದ ಹಿನ್ನೆಲೆಯಲ್ಲಿ ಆತ್ಮಚರಿತ್ರೆ ‘ನಿಲವು ಕುಡಿಚ ಸಿಂಹಂಗಲ್’ (ಅನುವಾದ ಚಂದ್ರನ ಬೆಳಕನ್ನು ಕುಡಿದ ಸಿಂಹಗಳು) ಪುಸ್ತಕದ ಪ್ರಕಟಣೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಅವರು ಖಚಿತಪಡಿಸಿದ್ದಾರೆ.
ಇದಕ್ಕೂ ಮುನ್ನಾ ಶಿವನ್ ಕುರಿತ ಕೆಲವು ಟೀಕೆಗಳ ಕುರಿತು ಪಿಟಿಐ ಜೊತೆ ಮಾತನಾಡಿದ ಅವರು, ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಪ್ರಯಾಣದ ಸಮಯದಲ್ಲಿ ಕೆಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚಿನ ವ್ಯಕ್ತಿಗಳು ಆ ಮಹತ್ವದ ಹುದ್ದೆಗೆ ಅರ್ಹರಾಗಿರಬಹುದು. ನಾನು ಆ ನಿರ್ದಿಷ್ಟ ಅಂಶವನ್ನು ಹೊರತರಲು ಪ್ರಯತ್ನಿಸಿದೆ. ಈ ವಿಷಯದಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ವಿವರಿಸಿದರು.
ಚಂದ್ರಯಾನ-2 ಮಿಷನ್ ವೈಫಲ್ಯದ ಘೋಷಣೆಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆಯನ್ನು ಅವರು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿರುವುದು ಅವರು ಒಪ್ಪಿಕೊಂಡಿದ್ದಾರೆ. ಅವರ ಆತ್ಮಕಥೆಯು ಜೀವನದಲ್ಲಿ ಸವಾಲುಗಳು ಮತ್ತು ಅಡೆತಡೆಗಳನ್ನು ಎದುರಿಸುವ ಮೂಲಕ ಸಾಧಿಸಲು ಬಯಸುವ ಜನರನ್ನು ಪ್ರೇರೇಪಿಸುವ ಪ್ರಯತ್ನವಾಗಿದೆ ಎಂದು ಅವರು ಪುನರುಚ್ಚರಿಸಿದ್ದು, ಯಾರನ್ನೂ ಟೀಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…