ರಾಷ್ಟ್ರೀಯ

‘ಆತ್ಮಚರಿತ್ರೆ’ ಪ್ರಕಟಣೆಯಿಂದ ಹಿಂದೆ ಸರಿದ ಇಸ್ರೋ ಅಧ್ಯಕ್ಷ ಎಸ್. ಸೋಮನಾಥ್

ಬೆಂಗಳೂರು : ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಅವರು ತಮ್ಮ ಮುಂಬರುವ ಆತ್ಮಚರಿತ್ರೆಯ ಪ್ರಕಟಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಪುಸ್ತಕದಲ್ಲಿ ಇಸ್ರೋ ಹಿಂದಿನ ಮುಖ್ಯಸ್ಥ ಕೆ ಶಿವನ್ ಅವರ ಬಗೆಗಿನ ಕೆಲವು ಟೀಕೆ ಟಿಪ್ಪಣಿಗಳು ವಿವಾದಕ್ಕೆ ಕಾರಣವಾಗಿವೆ.

ವಿವಾದದ ಹಿನ್ನೆಲೆಯಲ್ಲಿ ಆತ್ಮಚರಿತ್ರೆ ‘ನಿಲವು ಕುಡಿಚ ಸಿಂಹಂಗಲ್’ (ಅನುವಾದ ಚಂದ್ರನ ಬೆಳಕನ್ನು ಕುಡಿದ ಸಿಂಹಗಳು) ಪುಸ್ತಕದ ಪ್ರಕಟಣೆಯನ್ನು ಹಿಂಪಡೆಯಲು ನಿರ್ಧರಿಸಿರುವುದಾಗಿ ಅವರು ಖಚಿತಪಡಿಸಿದ್ದಾರೆ.

ಇದಕ್ಕೂ ಮುನ್ನಾ ಶಿವನ್ ಕುರಿತ ಕೆಲವು ಟೀಕೆಗಳ ಕುರಿತು ಪಿಟಿಐ ಜೊತೆ ಮಾತನಾಡಿದ ಅವರು, ಸಂಸ್ಥೆಯಲ್ಲಿ ಉನ್ನತ ಸ್ಥಾನವನ್ನು ತಲುಪಲು ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಪ್ರಯಾಣದ ಸಮಯದಲ್ಲಿ ಕೆಲವು ರೀತಿಯ ಸವಾಲುಗಳನ್ನು ಎದುರಿಸಬೇಕಾಗುತ್ತದೆ. “ಹೆಚ್ಚಿನ ವ್ಯಕ್ತಿಗಳು  ಆ ಮಹತ್ವದ ಹುದ್ದೆಗೆ ಅರ್ಹರಾಗಿರಬಹುದು. ನಾನು ಆ ನಿರ್ದಿಷ್ಟ ಅಂಶವನ್ನು ಹೊರತರಲು ಪ್ರಯತ್ನಿಸಿದೆ. ಈ ವಿಷಯದಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಅವರು ವಿವರಿಸಿದರು.

ಚಂದ್ರಯಾನ-2 ಮಿಷನ್ ವೈಫಲ್ಯದ ಘೋಷಣೆಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆಯನ್ನು ಅವರು ತಮ್ಮ ಪುಸ್ತಕದಲ್ಲಿ ಉಲ್ಲೇಖಿಸಿರುವುದು ಅವರು ಒಪ್ಪಿಕೊಂಡಿದ್ದಾರೆ. ಅವರ ಆತ್ಮಕಥೆಯು ಜೀವನದಲ್ಲಿ ಸವಾಲುಗಳು ಮತ್ತು ಅಡೆತಡೆಗಳನ್ನು ಎದುರಿಸುವ ಮೂಲಕ ಸಾಧಿಸಲು ಬಯಸುವ ಜನರನ್ನು ಪ್ರೇರೇಪಿಸುವ ಪ್ರಯತ್ನವಾಗಿದೆ ಎಂದು ಅವರು ಪುನರುಚ್ಚರಿಸಿದ್ದು, ಯಾರನ್ನೂ ಟೀಕಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

52 mins ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

2 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

4 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

5 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago

ಸಿಎಂ ಡಿಕೆಶಿ ಹಾಗೂ ಸಚಿವ ಲಕ್ಷ್ಮಣ್ ಸವದಿ ಸಹಕಾರದಿಂದ ಅಧ್ಯಕ್ಷನಾಗಿದ್ದೇನೆ: ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago