ರಾಷ್ಟ್ರೀಯ

ಜೈಪುರ: ಇಬ್ಬರು ಪಿಎಫ್‍ಐ ಸದಸ್ಯರ ಬಂಧನ

ಜೈಪುರ : ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಲಾಗಿದೆ.

ಜೊತೆಗೆ ಪಿಎಫ್‍ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ. ಎನ್‍ಐಎ ಪ್ರಕಾರ, ಬಂಧಿತರನ್ನು ವಾಜಿದ್ ಅಲಿ ಮತ್ತು ಮುಬಾರಿಕ್ ಅಲಿ ಎಂದು ಗುರುತಿಸಲಾಗಿದೆ, ಜೊತೆಗೆ ಪಿಎಫ್‍ಐನ ಇತರ ಮೂವರು ಸದಸ್ಯರಾದ ಮೊಹಮ್ಮದ್ ಆಸಿಫ್, ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಸೊಹೈಲ್ ನನ್ನು ಕೂಡ ವಶಕ್ಕೆ ಪಡೆದಿದೆ.

2047ರ ವೇಳೆಗೆ ಭಾರತದಲ್ಲಿ ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸುವ ಗುರಿ ಮತ್ತು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಕೇಂದ್ರ ಸರ್ಕಾರವನ್ನು ಹಿಂಸಾತ್ಮಕ ಕೃತ್ಯಗಳ ಮೂಲಕ ಉರುಳಿಸುವುದು ಅವರ ಗುರಿಯಾಗಿದೆ. ರಾಜಸ್ಥಾನ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ಮತ್ತು ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಮುಸ್ಲಿಂ ಯುವಕರನ್ನು ತೊಡಗಿಸಿಕೊಳ್ಳುವಲ್ಲಿ ಸಾದಿಕ್ ಸರ್ರಾಫ್ ಮತ್ತು ಮೊಹಮ್ಮದ್ ಆಸಿಫ್ ಭಾಗಿಯಾಗಿದ್ದಾರೆ ಎಂದು ಎನ್‍ಐಎ ಹೇಳಿಕೆಯಲ್ಲಿ ತಿಳಿಸಿದೆ.

ಎನ್‍ಐಎ ಪ್ರಕಾರ, ಝಕಾತ್ (ಸಾಮಾಜಿಕ ಅಭಿವೃದ್ಧಿಗಾಗಿ ಒಂದು ರೀತಿಯ ದತ್ತಿ ನಿಧಿ) ಸೋಗಿನಲ್ಲಿ ಮುಸ್ಲಿಂ ಸಮುದಾಯದ ಸದಸ್ಯರಿಂದ ಹಣವನ್ನು ಸಂಗ್ರಹಿಸಿದೆ ಆದರೆ ಶಸ್ತ್ರಾಸ್ತ್ರ ತರಬೇತುದಾರರನ್ನು ಬೆಂಬಲಿಸಲು ಮತ್ತು ತರಬೇತಿ ಶಿಬಿರಗಳನ್ನು ಆಯೋಜಿಸುತ್ತದೆ. ಪಿಎಫ್‍ಐಅನ್ನು ಕೇಂದ್ರ ಸರ್ಕಾರವು ಸೆಪ್ಟೆಂಬರ್ 2022 ರಲ್ಲಿ ನಿಷೇಧಿಸಿತ್ತು.

andolanait

Recent Posts

ಸಿಹಿ ಗೆಣಸಿಗೆ ಉತ್ತಮ ಬೆಲೆ; ರೈತರಲ್ಲಿ ಸಂತಸ

ದಾ.ರಾ.ಮಹೇಶ್ ವೀರನಹೊಸಹಳ್ಳಿ: ಸಿಹಿ ಗೆಣಸು ಬೆಳೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹನಗೂಡು…

4 mins ago

ರಷ್ಯಾದಲ್ಲಿ ಪ್ಲೇಗ್ ಪತ್ತೆಯಾಗಿಲ್ಲ: WHO ಸ್ಪಷ್ಟನೆ!

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…

17 hours ago

ರಾಜ್ಯದಲ್ಲಿ ಇನ್ಮುಂದೆ ಹಾಫ್ ಹೆಲ್ಮೆಟ್ ಬ್ಯಾನ್!

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…

17 hours ago

ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂ: ಮಾಜಿ ಸಚಿವ ಎನ್.ಮಹೇಶ್ ಭೇಟಿ, ಸಾಂತ್ವನ

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…

17 hours ago

ಮೈಸೂರು ದಸರಾ: ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…

17 hours ago