ಜಮ್ಮು : ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸುತ್ತಿರುವ ಗುಜ್ಜರ್, ಬಕರ್ ವಾಲ್, ಪಹಾರಿ ಸಮುದಾಯಗಳಿಗೆ ಕೆಲವೇ ದಿನಗಳಲ್ಲಿ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ಕಲ್ಪಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಜಮ್ಮುವಿನ ರಾಜೌರಿಯಲ್ಲಿ ಮಂಗಳವಾರ ನಡೆದ ಸಮಾವೇಶದಲ್ಲಿ ಭಾಗವಹಿಸಿದವರು ಮೀಸಲಾತಿ ವಿಚಾರವಾಗಿ ಕೇಂದ್ರಕ್ಕೆ ವರದಿಯನ್ನು ಸಲ್ಲಿಸಲಾಗಿದ್ದು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದರು.
370ನೇ ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ ಅಮಿತ್ ಶಾ, 370ನೇ ವಿಧಿ ರದ್ದು ಮಾಡಿದ್ದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ ಎಂದರು.