ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ ಅವರು ಪುನರಾಯ್ಕೆ ಯಾಗಿದ್ದಾರೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಗುರುವಾರ
ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ
ದೇವೇಗೌಡರನ್ನು ಆಯ್ಕೆ ಮಾಡಿ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಇದಕ್ಕೂ ಮುನ್ನ ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ಕಾರ್ಯಕಾರಿಣಿಯಲ್ಲಿ ಚರ್ಚೆ ಮಾಡಲಾಯಿತು.
ಮಾಜಿ ಪ್ರಧಾನಿಗಳೇ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳು ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಮಾಜಿ ಸಿಎಂ
ಹೆಚ್.ಡಿ.ಕುಮಾರಸ್ವಾಮಿ ಸೇರಿ 13 ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.
ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಭಾಗವಹಿಸಿದ್ದರು.