Mysore
24
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ ಚುನಾವಣೆ: ಜಯಭೇರಿ ಸಾಧಿಸಿದ ಸಂಯುಕ್ತ ಎಡ ಮೈತ್ರಿಕೂಟ!

ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ(ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಎಲ್ಲಾ ನಾಲ್ಕು ಸ್ಥಾನಗಳನ್ನು ಸಂಯುಕ್ತ ಎಡ ಮೈತ್ರಿಕೂಟವು ಗೆದ್ದುಕೊಂಡಿದೆ. ಹಾಗೂ ಆರ್‌ಎಸ್‌ಎಸ್‌ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಸಂಘಟನೆ ಭಾರೀ ಮುಖಭಂಗ ಅನುಭವಿಸಿದೆ.

ಭಾನುವಾರ (ಮಾ.೨೪) ನಡೆದ ಮತಏಣಿಕೆಯ ಆರಂಭದಲ್ಲಿ ಎಬಿವಿಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೂ, ಮತಏಣಿಕೆ ಪ್ರಗತಿ ಸಾಧಿಸುತ್ತಿದ್ದಂತೆಯೇ ಎಡಪಂಥೀಯ ಅಭ್ಯರ್ಥಿಗಳು ಭಾರೀ ಮುನ್ನಡೆಯೊಂದಿಗೆ ಜಯಭೇರಿ ಬಾರಿಸಿದರು.

ಕೋವಿಡ್‌ ನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. ಈಗ ಮೊದಲ ಬಾರಿಗೆ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿದೆ.

ವಿಜೇತ ಎಡ ಮೈತ್ರಿಕೂಟದ ಅಭ್ಯರ್ಥಿ ಧನಂಜಯ 3100 ಮತಗಳನ್ನು ಗಳಿಸಿ ಅಧ್ಯಕ್ಷರಾದರು. ಎಬಿವಿಪಿಯ ಅಧ್ಯಕ್ಷೀಯ ಅಭ್ಯರ್ಥಿ ಉಮೇಶ್ ಚಂದ್ರ ಅವರಿಗೆ 2,118 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು. ಜೊತೆಗೆ ಉಳಿದ ಮೂರು ಸ್ಥಾನಗಳು ಸಹಾ ಎಡರಂಗದ ಪಾಲಾಗಿದ್ದು, ಉಪಾಧ್ಯಕ್ಷರಾಗಿ ಆವಜಿತ್ ಘೋಷ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಶಿ ಆರ್ಯ, ಜಂಟಿ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಜಿದ್ ಆಯ್ಕೆಯಾಗಿದ್ದಾರೆ.

ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಅಖಿಲ ಭಾರತದ ವಿದ್ಯಾರ್ಥಿ ಸಂಘ (ಎಐಎಸ್‌ಎ), ಪ್ರಜಾತಾಂತ್ರಿಕ ವಿದ್ಯಾರ್ಥಿಗಳ ಒಕ್ಕೂಟ (ಡಿಎಸ್‌ಎಫ್), ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾಗೂ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್‌ಎಫ್) ಗಳನ್ನು ಒಳಗೊಂಡ ಸಂಯುಕ್ತ ಎಡರಂಗ ಹಾಗೂ ಆರೆಸ್ಸೆಸ್ ಬೆಂಬಲಿತ ಎಬಿವಿಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.

Tags:
error: Content is protected !!