ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ(ಜೆಎನ್‌ಯು) ವಿದ್ಯಾರ್ಥಿ ಒಕ್ಕೂಟದ ಚುನಾವಣೆಯಲ್ಲಿ ವಿದ್ಯಾರ್ಥಿ ಒಕ್ಕೂಟದ ಎಲ್ಲಾ ನಾಲ್ಕು ಸ್ಥಾನಗಳನ್ನು ಸಂಯುಕ್ತ ಎಡ ಮೈತ್ರಿಕೂಟವು ಗೆದ್ದುಕೊಂಡಿದೆ. ಹಾಗೂ ಆರ್‌ಎಸ್‌ಎಸ್ ಬೆಂಬಲಿತ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ಭಾರೀ ಮುಖಭಂಗ ಅನುಭವಿಸಿದೆ.
ಭಾನುವಾರ (ಮಾ.೨೪) ನಡೆದ ಮತಏಣಿಕೆಯ ಆರಂಭದಲ್ಲಿ ಎಬಿವಿಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೂ, ಮತಏಣಿಕೆ ಪ್ರಗತಿ ಸಾಧಿಸುತ್ತಿದ್ದಂತೆಯೇ ಎಡಪಂಥೀಯ ಅಭ್ಯರ್ಥಿಗಳು ಭಾರೀ ಮುನ್ನಡೆಯೊಂದಿಗೆ ಜಯಭೇರಿ ಬಾರಿಸಿದರು.
ಕೋವಿಡ್ ನಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಚುನಾವಣೆ ನಡೆದಿರಲಿಲ್ಲ. ಈಗ ಮೊದಲ ಬಾರಿಗೆ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿದೆ.
ವಿಜೇತ ಎಡ ಮೈತ್ರಿಕೂಟದ ಅಭ್ಯರ್ಥಿ ಧನಂಜಯ 3100 ಮತಗಳನ್ನು ಗಳಿಸಿ ಅಧ್ಯಕ್ಷರಾದರು. ಎಬಿವಿಪಿಯ ಅಧ್ಯಕ್ಷೀಯ ಅಭ್ಯರ್ಥಿ ಉಮೇಶ್ ಚಂದ್ರ ಅವರಿಗೆ 2,118 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದರು. ಜೊತೆಗೆ ಉಳಿದ ಮೂರು ಸ್ಥಾನಗಳು ಸಹಾ ಎಡರಂಗದ ಪಾಲಾಗಿದ್ದು, ಉಪಾಧ್ಯಕ್ಷರಾಗಿ ಆವಜಿತ್ ಘೋಷ್, ಪ್ರಧಾನ ಕಾರ್ಯದರ್ಶಿಯಾಗಿ ಪ್ರಿಯಾಂಶಿ ಆರ್ಯ, ಜಂಟಿ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾಜಿದ್ ಆಯ್ಕೆಯಾಗಿದ್ದಾರೆ.
ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳಾದ ಅಖಿಲ ಭಾರತದ ವಿದ್ಯಾರ್ಥಿ ಸಂಘ (ಎಐಎಸ್‌ಎ), ಪ್ರಜಾತಾಂತ್ರಿಕ ವಿದ್ಯಾರ್ಥಿಗಳ ಒಕ್ಕೂಟ (ಡಿಎಸ್‌ಎಫ್), ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಹಾಗೂ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟ (ಎಐಎಸ್‌ಎಫ್) ಗಳನ್ನು ಒಳಗೊಂಡ ಸಂಯುಕ್ತ ಎಡರಂಗ ಹಾಗೂ ಆರೆಸ್ಸೆಸ್ ಬೆಂಬಲಿತ ಎಬಿವಿಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿತ್ತು.
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದ ಗ್ರಾಮಗಳಿಗೆ ಕಾಡಾನೆ ಭೀಮು ಎಂಟ್ರಿ ಕೊಡುತ್ತಿದೆ. ಶಾಂತ ಸ್ವಭಾವದ ಭೀಮನನ್ನು ನೋಡಲು ಜನರು…
ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್ ಕಾಲೋನಿ ಹಾಗೂ ವಸೀಮ್ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್ ಚಿತ್ರಕ್ಕೂ ಪೈರಸಿ…
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…
ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…
ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…