Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ಮಣಿಪುರದಲ್ಲಿ ʼಭಾರತ್ ನ್ಯಾಯ್ ಜೋಡೋ ಯಾತ್ರೆʼಗೆ ಚಾಲನೆ ನೀಡಿದ ʼಕೈʼ ದಿಗ್ಗಜರು

ಮಣೀಪುರ :  ಭಾರತ್ ನ್ಯಾಯ್ ಜೋಡೋ ಯಾತ್ರೆಗೆ  ಇಂದು  ಮಣಿಪುರದಲ್ಲಿ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅದ್ಧೂರಿ ಚಾಲನೆ ನೀಡಿದರು.

ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಾಯಕರು ಚಾಲನೆ ನೀಡಿದರು.ರಾಹುಲ್ ಗಾಂಧಿ ನೇತೃತ್ವದಲ್ಲಿ ಮಣಿಪುರದ ತೌಬಲ್ ಜಿಲ್ಲೆಯಿಂದ ಇಂದಿನಿಂದ ಭಾರತ್ ಜೋಡೋ ನ್ಯಾಯ್ ಯಾತ್ರೆ ಆರಂಭಗೊಳ್ಳಲಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಈ ಯಾತ್ರೆ ನಡೆಯಲಿದೆ.

ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಿಂದ ಆರಂಭಗೊಂಡಿರುವಂತ ಯಾತ್ರೆ, 15 ರಾಜ್ಯಗಳ 100 ಲೋಕಸಭಾ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ತಯಾರಿಯನ್ನು ನಡೆಸಲಿದೆ.

ಒಟ್ಟಾರೆಯಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಸಂಸದ ರಾಹುಲ್ ಗಾಂಧಿ ಅವರು ಮಣಿಪುರದ ತೌಬಾಲ್ ನಿಂದ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಗೆ ಹಸಿರು ನಿಶಾನೆ ತೋರಿದರು.

ಈ ಯಾತ್ರೆಯು 110 ಜಿಲ್ಲೆಗಳ ಮೂಲಕ 67 ದಿನಗಳಲ್ಲಿ 6,700 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!