ನವದೆಹಲಿ: ಬಾಲಿವುಡ್‌ನ ಖ್ಯಾತ ನಟಿ ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಿರುವ ವಿಷಯ ಎಲ್ಲೆಡೆ ಸದ್ದು ಮಾಡಿತ್ತು. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ಸಿಕ್ಕಿರಲಿಲ್ಲ.
ಆದರೆ ಇದೀಗ ಕಂಗನಾ ರಣಾವತ್ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂಬುದು ಬಹುತೇಕ ಖಚಿತವಾಗಿದೆ.
ಈ ಕುರಿತು ಕಂಗನಾ ಅವರ ತಂದೆ ಅಮರ್ ದೀಪ್ ಅವರೇ ಮಾತನಾಡಿದ್ದು, ಕಂಗನಾ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಆದರೆ ಯಾವು ಕ್ಷೇತ್ರದಿಂದ ಎಂಬುದನ್ನು ಬಿಜೆಪಿ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಈ ಹಿಂದೆ ರಾಜಕೀಯದ ಆಸಕ್ತಿ ಇದೆಯೇ ಎಂದು ಮಾಧ್ಯಮದವರು ಕೇಲಿದ್ದ ಪ್ರಶ್ನೆಗೆ ಉತ್ತರಿಸಿದ್ದ ಕಂಗನಾ, ಶ್ರೀಕೃಷ್ಣ ಆಶಿರ್ವಾದವಿದ್ದರೆ ಖಂಡಿತ ಸ್ಪರ್ಧೆ ಮಾಡುವುದಾಗಿ ಹೇಳಿದ್ದರು.





