ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 22ರಂದು ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಮೂಲದ ರಾಮಭಕ್ತರಿಗೆ ಮುಜರಾಯಿ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದೆ.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲು ಕರ್ನಾಟಕ ಮುಂದಾಗಿದ್ದು, ಇದು ಅಯೋಧ್ಯೆಗೆ ತೆರಳಲಿರುವ ಕರ್ನಾಟಕ ಮೂಲದ ಭಕ್ತರಿಗೆ ಉಳಿದುಕೊಳ್ಳಲು ನೆರವಾಗಲಿದೆ. ಇನ್ನು ಧಾರ್ಮಿಕ ದತ್ತಿ ಇಲಾಖೆ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಅನುಮತಿ ಕೋರಿ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರವನ್ನೂ ಸಹ ಬರೆದಿದೆ.
ಕರ್ನಾಟಕ ಮೂಲದಿಂದ ಅನೇಕ ಭಕ್ತರು ಕ್ಷೇತ್ರಕ್ಕೆ ಆಗಮಿಸಲಿದ್ದು ಅಂಥವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸುವ ಸಲುವಾಗಿ 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಿಸಲು ಸಿದ್ದರಿದ್ದೇವೆ ಅನುಮತಿ ನೀಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.





