ರಾಷ್ಟ್ರೀಯ

ಕೇರಳ: ಮುವಾಟ್ಟುಪುಳದಲ್ಲಿ ಕತ್ತು ಸೀಳಿ ಇಬ್ಬರು ವಲಸೆ ಕಾರ್ಮಿಕರ ಬರ್ಬರ ಹತ್ಯೆ

ಕೊಚ್ಚಿ : ಕೇರಳದ ಎರ್ನಾಕುಲಂನ ಮುವಾಟ್ಟುಪುಳದ ಕಂಪಾನಿಪಾಡಿಯಲ್ಲಿ ಭಾನುವಾರ ಮಧ್ಯಾಹ್ನ ಟಿಂಬರ್ ಯಾರ್ಡ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ.

ಮೃತರನ್ನು ಅಸ್ಸಾಂ ಮೂಲದ ಮೊಹಂತೋ ಮತ್ತು ದೆಪ್ಪಾಶಂಕರ್ ಬಸುಮ್ಮ ಎಂದು ಗುರುತಿಸಲಾಗಿದೆ.

ಸಂಜೆ 4 ಗಂಟೆ ಸುಮಾರಿಗೆ ಇಬ್ಬರ ಮೃತದೇಹಗಳನ್ನು ಅವರ ಸಹೋದ್ಯೋಗಿಗಳು ನೋಡಿದ್ದಾರೆ. ಇಬ್ಬರೂ ಒಂದೇ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಘಟನೆಯ ನಂತರ ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಒಬ್ಬ ವ್ಯಕ್ತಿ ಮತ್ತು ಅವರ ಆಪ್ತ ಸ್ನೇಹಿತ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದ್ದು, ನಿನ್ನೆ ರಾತ್ರಿಯೇ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

andolanait

Recent Posts

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಮೈಸೂರು : ಕೆ-ಸೆಟ್‌ ಮತ್ತು ಯುಜಿಸಿ-ನೆಟ್‌, ಜೆಆರ್‌ಎಫ್‌ ಅರ್ಹತಾ ಪರೀಕ್ಷೆ ಬರೆಯುವವರಿಗೆ 45 ದಿನಗಳ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ…

58 mins ago

ಹಾಸನ | ಮೆದುಳಿನಲ್ಲಿ ತೀವ್ರ ರಕ್ತಸ್ರಾವ ; 25 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಯುವತಿ ಸಾವು

ಹಾಸನ : ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್‌ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ…

1 hour ago

ಚೆಲುವಾಂಬ ಆಸ್ಪತ್ರೆ | 15 ತಿಂಗಳಲ್ಲಿ 421 ಶಿಶು ಮರಣ ; ದಾಖಲೆ ಬಿಡುಗಡೆ ಮಾಡಿದ ಮಾಜಿ ಶಾಸಕ ನಾಗೇಂದ್ರ

ಮೈಸೂರು : ಮೈಸೂರು ಪ್ರಾಂತ್ಯದಲ್ಲೇ ಪ್ರಸೂತಿ, ಸ್ತ್ರೀರೋಗ ಮತ್ತು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಲ್ಲಿ ಹೆಸರುವಾಸಿಯಾಗಿದ್ದ ಮೈಸೂರಿನ ಚೆಲುವಾಂಬ ಆಸ್ಪತ್ರೆಯ…

1 hour ago

ಪಶ್ಚಿಮ ಬಂಗಾಳ ಎರಡನೇ ಹಂತದ ಚುನಾವಣೆ : ಏ.29ರಂದು ಮತದಾನ ; ಭಾರೀ ಬಿಗಿ ಭದ್ರತೆ

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಬಹಿರಂಗ ಚುನಾವಣೆ ಸೋಮವಾರ ಅಂತ್ಯವಾಗಿದೆ. ಏ.29ರಂದು ಮತದಾನ ನಡೆಯಲಿದ್ದು,…

2 hours ago

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

3 hours ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

4 hours ago