ರಾಷ್ಟ್ರೀಯ

ಕೇರಳ ಬಿಜೆಪಿ ನಾಯಕನ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ!

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು.

ಈ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ಕುರಿತು ಹೆಚ್ಚುವರಿ ವಿಚಾರಣೆ ನಡೆಸಿದ್ದ ಮವೆಲ್ಲಿಕಾರಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಜನವರಿ 20ರಂದು ತೀರ್ಪು ನೀಡಿ ಎಲ್ಲಾ 15 ಬಂಧಿತ ಆರೋಪಿಗಳನ್ನೂ ದೋಷಿಗಳು ಎಂದು ತೀರ್ಪು ನೀಡಿತ್ತು. ಇಂದು ( ಜನವರಿ 30 ) ಎಲ್ಲಾ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸಿ ಆದೇಶ ಹೊರಡಿಸಿದೆ.

 

andolana

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago