ಬೆಂಗಳೂರು: ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ʼಲಖ್ ಪತಿ ದೀದಿʼ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗುತ್ತಿದೆ ಎಂದು ನಿರ್ಮಲಾ ಸಿತಾರಾಮನ್ ತಿಳಿಸಿದರು.
ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಲಖ್‌ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಮುಂದುವರೆದಂತೆ, ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.
ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.