ಕನ್ನಡದ ಖ್ಯಾತ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ರಚನೆಯ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼ ಪ್ರಬಂಧಗಳಿಗೆ ಈ ಪ್ರತಿಷ್ಠಿತ ಪ್ರಶಸ್ರಿ ಲಭಿಸಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.
ಸಾಹಿತ್ಯ ಅಕಾಡೆಮಿಯು ವಾರ್ಷಿಕ ಅಕಾಡೆಮಿ 24 ಭಾಷೆಗಳಲ್ಲಿ ಪ್ರಶಸ್ತಿಗಳನ್ನು ಇಂದು ( ಡಿಸೆಂಬರ್ 20 ) ಪ್ರಕಟಿಸಿದ್ದು, ಇದರಲ್ಲಿ 9 ಕವನಗಳು, 6 ಕಾದಂಬರಿಗಳು, 5 ಸಣ್ಣ ಕಥೆಗಳು, 3 ಪ್ರಬಂಧಗಳು ಹಾಗೂ 1 ಸಾಹಿತ್ಯ ಅಧ್ಯಯನ ಈ ಬಾರಿಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು ಪಡೆದುಕೊಂಡಿವೆ.