ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆ ನವೀಕರಿಸಿದ ರೈಲು ನಿಲ್ದಾಣ, ಹೊಸ ರೈಲುಗಳಿಗೆ ಚಾಲನೆ ಮತ್ತು ಅಯೋಧ್ಯೆ ವಾಲ್ಮೀಕಿ ವಿಮಾನ ನಿಲ್ದಾಣ ಸೇರಿದಂತೆ ಸೇರಿದಂತೆ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಇಂದು(ಶನಿವಾರ) ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ವೇಳೆಗೆ ನೀವೆಲ್ಲರೂ ನಿಮ್ಮ ಮನೆಯಲ್ಲಿ ದೀಪಾವಳಿ ಆಚರಿಸಬೇಕು. ಪ್ರತಿಯೊಬ್ಬರೂ ಮನೆಯಲ್ಲಿ ‘ದಿಯಾ ಜಲಾಯೇ’ (ದೀಪ ಬೆಳಗಿಸಿ) ಎಂದು ನಾನು ವಿನಂತಿಸುತ್ತೇನೆ. ಭಗವಾನ್ ರಾಮನ ಭಕ್ತರು ತೊಂದರೆಯಾಗುವಂತ ಯಾವುದೇ ಕಾರ್ಯಗಳನ್ನು ಮಾಡಬಾರದು. ಇದು ನನ್ನ ವಿನಮ್ರ ಮನವಿ ಎಂದು ಪ್ರಧಾನಿ ಮೋದಿ ಹೇಳಿದರು.
ಜನವರಿ 22 ರಂದು ರಾಮ ಮಂದಿರಕ್ಕೆ ಯಾರು ಬರಲು ನಿರ್ಧರಿಸಬೇಡಿ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಅವಕಾಶ ನೀಡಿ. ಜನವರಿ 23 ರ ನಂತರ ನೀವು ಯಾವಾಗ ಬೇಕಾದರೂ ಬರಬಹುದು. “ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಹಾಜರಾಗಲು ಬಯಸುತ್ತಾರೆ, ಆದರೆ ಅದು ಲಾಜಿಸ್ಟಿಕ್ಸ್ ಮತ್ತು ಭದ್ರತಾ ಕಾರಣಗಳಿಂದಾಗಿ ಎಲ್ಲರಿಗೂ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ನೀವು 550 ವರ್ಷಗಳಿಗೂ ಹೆಚ್ಚು ಕಾಲ ಕಾಯುತ್ತಿದ್ದೀರಿ. ಇನ್ನೂ ಸ್ವಲ್ಪ ಸಮಯ ಕಾಯಿರಿ” ಎಂದು ಪ್ರಧಾನಿ ಮೋದಿ ಸೂಚಿಸಿದರು.
ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, ಯಾವುದೆ ಅಡ್ಡಿ ಉಂಟಾಗಬಾರದು. ಜನವರಿ, ಫೆಬ್ರವರಿ ಅಥವಾ ಮುಂದಿನ ವರ್ಷ ಯಾವಾಗ ಬೇಕಾದರು ಬರಬಹುದು. ದೇವಸ್ಥಾನ ಎಲ್ಲಿಯೂ ಹೋಗುವುದಿಲ್ಲ. ಜನವರಿ 22ರಂದು ಬಂದು ದೇವಾಲಯದ ಆಡಳಿತ ಮಂಡಳಿಗೆ ಭಕ್ತರಿಂದ ತೊಂದರೆಯಾಗಬಾರದು. ಜನವರಿ 23 ರ ನಂತರ ಭೇಟಿ ನೀಡಲು ಸುಲಭವಾಗುತ್ತದೆ ಎಂದರು. ಜೊತೆಗೆ ಅಯೋಧ್ಯೆಯನ್ನು ದೇಶದ ಅತ್ಯಂತ ಸ್ವಚ್ಛ ನಗರವನ್ನಾಗಿ ಮಾಡಲು ಅಯೋಧ್ಯೆಯ ಜನರು ಪ್ರತಿಜ್ಞೆ ಮಾಡಬೇಕಾಗಿದೆ ಎಂದಿದ್ದಾರೆ.
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…
ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…
ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…