ನವದೆಹಲಿ : ಖಲಿಸ್ತಾನಿ ಭಯೋತ್ಪಾದಕ ಗುರ್ಪತ್ವಂತ್ ಸಿಂಗ್ ಪನ್ನುನ್‌ನ ಹೊಸ ವೀಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತ್ಯಕ್ಷವಾಗಿದೆ, ವೀಡಿಯೊದಲ್ಲಿ ನ.19ರಂದು ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಲು ಯೋಜಿಸಿರುವವರಿಗೆ ಬೆದರಿಕೆಯನ್ನು ಒಡ್ಡಿರುವ ಆತ, ‘ನಿಮ್ಮ ಜೀವಗಳಿಗೆ ಅಪಾಯವಾಗಲಿದೆ ’ ಎಂದು ಹೇಳಿದ್ದಾನೆ.
‘ನ.19ರಂದು ಏರ್‌ಇಂಡಿಯಾ ವಿಮಾನದಲ್ಲಿ ಪ್ರಯಾಣಿಸಬೇಡಿ ಎಂದು ನಾವು ಸಿಖ್ ಜನರಿಗೆ ಸೂಚಿಸುತ್ತಿದ್ದೇವೆ. ಅಂದು ಜಾಗತಿಕ ದಿಗ್ಬಂಧನವಿರಲಿದೆ. ಏರ್‌ಇಂಡಿಯಾದಲ್ಲಿ ಪ್ರಯಾಣಿಸಬೇಡಿ, ಇಲ್ಲದಿದ್ದರೆ ನಿಮ್ಮ ಜೀವ ಅಪಾಯಕ್ಕೆ ಸಿಲುಕಲಿದೆ’ ಎಂದು ಆತ ವೀಡಿಯೊದಲ್ಲಿ ಹೇಳಿದ್ದಾನೆ.
ನ.19ರಂದು ದಿಲ್ಲಿಯ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಮುಚ್ಚಿರಲಿದೆ ಮತ್ತು ಅದರ ಹೆಸರನ್ನು ಬದಲಿಸಲಾಗುವುದು ಎಂದೂ ಪನ್ನುನ್ ಹೇಳಿಕೊಂಡಿದ್ದಾರೆ.
ನ.19 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿ ಅಂತಿಮ ಪಂದ್ಯ ನಡೆಯಲಿರುವ ದಿನವೂ ಆಗಿದೆ ಎಂದು ಆತ ಬೆಟ್ಟು ಮಾಡಿದ್ದಾನೆ.
ಪಂಜಾಬ್ ಮತ್ತು ಇತರ ಕಡೆಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪ್ರಮುಖ ಪಾತ್ರವನ್ನು ಹೊಂದಿರುವ ಪನ್ನುನ್ ವಿರುದ್ಧ ವಿಶೇಷ ಎನ್‌ಐಎ ನ್ಯಾಯಾಲಯವು 2021, ಫೆ.3ರಂದು ಜಾಮೀನುರಹಿತ ವಾರಂಟ್ ಹೊರಡಿಸಿದ್ದು,ಕಳೆದ ವರ್ಷದ ನವಂಬರ್‌ನಲ್ಲಿ ನ್ಯಾಯಾಲಯವು ಆತನನ್ನು ‘ಘೋಷಿತ ಅಪರಾಧಿ’ ಎಂದು ಪ್ರಕಟಿಸಿತ್ತು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…