ಮಧ್ಯಪ್ರದೇಶ: ಎರಡು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಬಿಜೆಪಿ ನಾಯಕಿ ಮತ್ತು ನಟಿ ಜಯಪ್ರದಾ ಅವರನ್ನು ಬಂಧಿಸಲು ರಾಮ್‌ಪುರ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.
ಎರಡು ಪ್ರಕರಣಗಳಿಗೂ ಹಾಜರಾಗದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಕೋರ್ಟ್ ಅವರಿಗೆ ಜಾಮೀನು ರಹಿತ ವಾರೆಂಟ್ ನೀಡಲಾಗಿದ್ದು, ನ್ಯಾಯಾಲಯದ ಆದೇಶಕ್ಕನುಗುಣವಾಗಿ ಜನವರಿ ೧೦ ರ ಒಳಗಾಗಿ ಬಿಜೆಪಿ ನಾಯಕಿ ಜಯಪ್ರದಾ ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಪೊಲೀಸ್ ವರಿಷ್ಠಾಧಿಕಾರಿಗೆ ಕೋರ್ಟ್ ಸೂಚನೆ ನೀಡಿದೆ.
ನ್ಯಾಯಾಲಯದ ಆದೇಶಕ್ಕನುಗುಣವಾಗಿ ಜಯಪ್ರದಾ ಅವರನ್ನು ಬಂಧಿಸಲು ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿದೆ ಎಂದು ರಾಂಪುರ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ವರಿ ದ್ವಿವೇದಿ ಹೇಳಿದ್ದಾರೆ.
ಜಯಪ್ರದಾ ವಿರುದ್ಧ ದಾಖಲಾಗಿರುವ ಎರಡೂ ಪ್ರಕರಣಗಳು ೨೦೧೯ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದ್ದಾಗಿದೆ. ೨೦೧೯ ರಲ್ಲಿ ರಾಂಪುರ ಕ್ಷೇತ್ರದಿಂದ ಬಜೆಪಿ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿದ್ದರು. ಇವರ ಮೇಲೆ ನೂರಪುರ ಗ್ರಾಮದಲ್ಲಿ ಅಕ್ಟೋಬರ್ ೧೯ ರಂದು ನೀತಿ ಸಂಹಿತೆ ಉಲ್ಲಂಘಿಸಿ ರಸ್ತೆ ಉದ್ಘಾಟನೆ ಮಾಡಿದ ಆರೋಪದಡಿ ಸ್ವರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಿಪ್ಲಿಯಾ ಮಿಶ್ರಾ ಗ್ರಾಮದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದಡಿ ಎರಡನೇ ಪ್ರಕರಣ ಕೆಮ್ರಿ ಪೊಲೀಸ ಠಾಣೆಯಲ್ಲಿ ದಾಖಲಾಗಿದೆ.




