ಮುಂಬೈ(ಪಿಟಿಐ) : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‍ಕೇರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‍ಡಿಆರ್‍ಎಫ್) ಅಧಿಕಾರಿ ತಿಳಿಸಿದ್ದಾರೆ.
ಇಂದು ಬೆಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಈ ಮೃತರು ಸೇರಿದ್ದಾರೆ. ನಾಪತ್ತೆಯಾಗಿರುವ ಏಳು ಜನರ ಪತ್ತೆಗಾಗಿ ನಮ್ಮ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಅವರು ಹೇಳಿದರು.
ಪ್ರಾಥಮಿಕ ತನಿಖೆಯ ಪ್ರಕಾರ, ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ಕಾಣಿಸಿಕೊಂಡಿದೆ ನಂತರ ರಾಸಾಯನಿಕ ಹೊಂದಿರುವ ಬ್ಯಾರೆಲ್‍ಗಳಿಗೆ ಬೆಂಕಿ ತಗುಲಿದ್ದು, ಬೆಂಕಿ ಕೆನ್ನಾಲಿಗೆಗೆ ಕಾರಣವಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…