ಕೋಲ್ಕತ್ತ : ಪಶ್ಚಿಮ ಬಂಗಾಳ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.
ನಗರದ ಕೇಂದ್ರ ಭಾಗದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಬುಧವಾರ ಮಧ್ಯಾಹ್ನದಿಂದ ಮಮತಾ ಹಾಗೂ ಟಿಎಂಸಿ ಪಕ್ಷದ ನಾಯಕರು ಧರಣಿ ಆರಂಭಿಸಿದ್ದು, ತಾರತಮ್ಯ ಧೋರಣೆಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕರೆಕೊಟ್ಟಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಲಪಂಥೀಯ ಪಕ್ಷಗಳಿಂದ ಟಿಎಂಸಿಯು ಅಂತರ ಕಾಪಾಡಿಕೊಳ್ಳುವ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದು ತಿಳಿಸಿದ್ದಾರೆ.ಗುರುವಾರ ಸಂಜೆ ಈ ಅಹೋರಾತ್ರಿ ಧರಣಿ ಮುಕ್ತಾಯಗೊಳ್ಳಲಿರುವ ಮೂಲಕ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಬಿಸಿ ಏರಲಾರಂಭಿಸಿದೆ.ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆಗಳನ್ನೂ ಕೈಗೊಂಡಿದ್ದಾರೆ. ಈ ಮೂಲಕ ಬಂಗಾಳದಲ್ಲಿ ರ್ಯಾಲಿ ಮೇಲಾಟಗಳು ಶುರುವಾಗಿದೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಶಾಸಕ ಗೌರಿಶಂಕರ್ ಆಯ್ಕೆ ಅಸಿಂಧು : ಹೈಕೋರ್ಟ್ ತೀರ್ಪು