ಉತ್ತರಪ್ರದೇಶ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಮಂದಿರದ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಅಲಂಕಾರಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಪ್ರಭು ಶ್ರೀರಾಮನ ಜನ್ಮಸ್ಥಳ ಹಾಗೂ ದೇಶದ ಪ್ರಮುಖ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಒಂದಾದ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣವಾಗಿ ಉದ್ಘಾಟನೆಗೆ ಅಣಿಯಾಗುತ್ತಿದೆ. ಹಿಂದೂಗಳ ಬಹುದಿನಗಳ ಕನಸು ನನಸಾಗುತ್ತಿದೆ ಎಂದರು.
ಮಂದಿರದ ಉದ್ಘಾಟನೆಯ ಹಿಂದೆ ರಾಮ ಮಂದಿರ ನಿರ್ಮಾಣ ಸೇವಾ ಟ್ರಸ್ಟ್ ಅಚ್ಚುಕಟ್ಟಾಗಿ ಕಾರ್ಯ ನಿರ್ವಹಿಸಿದೆ. ಮಂದಿರದ ವಿದ್ಯುತ್ ದೀಪಾಲಂಕಾರ ಕಾರ್ಯ ನಮ್ಮ ರಾಜ್ಯದವರು ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.