ಮುಂಬೈ : ಯುವತಿ ಸ್ನೇಹಿತೆಯಾಗಿದ್ದ ಮಾತ್ರಕ್ಕೆ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಇದೆ ಎಂದರ್ಥವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮದುವೆಯಾಗುವ ಉದ್ದೇಶದಿಂದ ಯುವತಿಯನ್ನು ಗರ್ಭಿಣಿ ಮಾಡಿದ ಆರೋಪಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.
ಯುವತಿ ಯನ್ನು ಮದುವೆಯಾಗುವುದಾಗಿ ಹೇಳಿ ಅತ್ಯಾಚಾರವೆಸಗಿದ್ದ ನಗರದ ನಿವಾಸಿ ಆಶಿಷ್ ಚಾಕೋರ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ, ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕಸದಸ್ಯ ಪೀಠ ಈ ಸಂಬಂಧ ಇದೇ 24 ರಂದು ಆದೇಶವನ್ನು ಹೊರಡಿಸಿದೆ.
ಸ್ನೇಹದಿಂದ ಇರುವುದನೇ ನೆಪವಾಗಿಟ್ಟುಕೊಂಡು ಲೈಂಗಿಕ ಸಂಬಂಧಕ್ಕೆ ಆಕೆಯ ಒಪ್ಪಿಗೆ ಇದೆ ಎಂದು ತಾನೆ ಅಂದುಕೊಳ್ಳುವಂತಿಲ್ಲ. ಆರೋಪಿಗಳಾದ ದೂರಿನ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಬೇಕು ಎಂದು ನ್ಯಾಯಮೂರ್ತಿ ಹೇಳಿದ್ದಾರೆ.
ಈ ಬಗ್ಗೆ ಹೇಳಿರುವ ಸಂತ್ರಸ್ತೆ ಚಾಕೋರ್ ಜೊತೆ ಸ್ನೇಹದಿಂದ ಇದೆ, ನಂತರದ ದಿನಗಳಲ್ಲಿ ಆತ ನನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದ. ನಾನು ಗರ್ಭಿಣಿ ಆಗುತ್ತಿದ್ದಂತೆ ಮದುವೆಯಾಗಲು ನಿರಾಕರಿಸಿದ. ಈ ಆರೋಪದಿಂದ ಮುಕ್ತಗೊಳ್ಳಲು ಆತ ನನಗೂ ಸಹ ಲೈಂಗಿಕ ಸಂಬಂಧಕ್ಕೆ ಒಪ್ಪಿಗೆ ಇದೆ ಎಂದು ಹೇಳಿದ್ದಾನೆ ಎಂದು ತಿಳಿಸಿದ್ದಾಳೆ.