ಹರ್ಯಾಣ : ಹರ್ಯಾಣದಲ್ಲಿ 2,600 ಹಾಸಿಗೆಗಳಿರುವ ಅಮೃತಾ ಖಾಸಗಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು 2014 ರ ಮೊದಲು, ದೇಶದಲ್ಲಿ 400 ಕ್ಕಿಂತ ಕಡಿಮೆ ವೈದ್ಯಕೀಯ ಕಾಲೇಜುಗಳಿದ್ದವು. ಕಳೆದ 8 ವರ್ಷಗಳಲ್ಲಿ, ದೇಶದಲ್ಲಿ 200 ಕ್ಕೂ ಹೆಚ್ಚು ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಲಾಗಿದೆ ಎಂದು ತಿಳಿಸಿದರು.
ಭಾರತ ಆರೋಗ್ಯ ಮತ್ತು ಆಧ್ಯಾತ್ಮಿಕತೆ ನಿಕಟ ಸಂಬಂಧ ಹೊಂದಿರುವ ದೇಶವಾಗಿದೆ. ಕೋವಿಡ್ 19 ಯಶಸ್ವಿ ಆಧ್ಯಾತ್ಮಿಕ-ಖಾಸಗಿ ಪಾಲುದಾರಿಕೆಗೆ ಪರಿಪೂರ್ಣ ಉದಾಹರಣೆಯಾಗಿದೆ ಎಂದರು. ಇದು ಜಾಗೃತಿ ಮೂಡಿಸಲು ಮತ್ತು ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಡ್ರೈವ್ ಅನ್ನು ಕಾರ್ಯಗತಗೊಳಿಸಲು ಸಹಾಯ ಮಾಡಲಿದೆ ಎಂದರು. ತಂತ್ರಜ್ಞಾನ ಮತ್ತು ಆಧುನೀಕರಣದ ಸಂಯೋಜನೆಯು ಆರೋಗ್ಯ ಕ್ಷೇತ್ರದಲ್ಲಿ ದೇಶದ ಪ್ರಗತಿಗೆ ಕಾರಣವಾಗುತ್ತದೆ ಎಂದು ಪ್ರಧಾನಿ ಹೇಳಿದರು.
ಅತ್ಯಾಧುನಿಕ ಅಮೃತಾ ಆಸ್ಪತ್ರೆ, ಮೀಸಲಾದ ಏಳು ಅಂತಸ್ತಿನ ಸಂಶೋಧನಾ ಬ್ಲಾಕ್ ಅನ್ನು ಹೊಂದಿದ್ದು. ಇದನ್ನು ಮಾತಾ ಅಮೃತಾನಂದಮಯಿ ಮಠದ ಆಶ್ರಯದಲ್ಲಿ ಆರು ವರ್ಷಗಳ ಅವಧಿಯಲ್ಲಿ ನಿರ್ಮಿಸಲಾಗಿದೆ.