Mysore
16
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ದಲಿತ ಬಾಲಕಿಯನ್ನು ಬಿಸಿ ಎಣ್ಣೆ ಕಡಾಯಿಗೆ ತಳ್ಳಿದ ದುಷ್ಕರ್ಮಿಗಳು!

ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.

ಬಾಲಕಿ ಎಣ್ಣೆ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಗಿರಣಿ ಮಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಬಾಲಕಿಯ ಸಹೋದರ ನೀಡಿದ ದೂರಿನ ಪ್ರಕಾರ, ಆಕೆ ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದಾಗ ಆಕೆ ಪ್ರತಿಭಟಿಸಿದ್ದಾಳೆ. ರೊಚ್ಚಿಗೆದ್ದ ಆರೋಪಿಗಳು ಜಾತಿ ನಿಂದನೆ ಮಾಡಿ, ನಂತರ ಅವಳನ್ನು ಬಿಸಿ ಎಣ್ಣೆ ತುಂಬಿದ ಕಡಾಯಿಗೆ ತಳ್ಳಿದ್ದಾರೆ ಎಂದು ಆಕೆಯ ಸಹೋದರ ಹೇಳಿದ್ದಾರೆ.

ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ನಿಂದಿಸಿದ ಬಳಿಕ ಬಿಸಿ ಎಣ್ಣೆಗೆ ದೂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.

ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!