ನವದೆಹಲಿ: ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದನ್ನು ವಿರೋಧಿಸಿ ಪ್ರತಿರೋಧ ತೋರಿದ್ದಕ್ಕೆ 18 ವರ್ಷದ ದಲಿತ ಬಾಲಕಿಯೊಬ್ಬಳನ್ನು ಬಿಸಿ ಎಣ್ಣೆಯ ಕಡಾಯಿಗೆ ತಳ್ಳಿದ ಆತಂಕಕಾರಿ ಘಟನೆಯೊಂದು ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಕಿಗೆ ಗಂಭೀರ ಸುಟ್ಟ ಗಾಯಗಳಾಗಿವೆ. ಆಕೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಗೆ ಸ್ಥಳಾಂತರಿಸಲಾಗಿದೆ.
ಬಾಲಕಿ ಎಣ್ಣೆ ಗಿರಣಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿ ಗಿರಣಿ ಮಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
ಬಾಲಕಿಯ ಸಹೋದರ ನೀಡಿದ ದೂರಿನ ಪ್ರಕಾರ, ಆಕೆ ಧನೂರ ಸಿಲ್ವರ್‌ನಗರ ಗ್ರಾಮದ ಆಯಿಲ್ ಮಿಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಆರೋಪಿಗಳಾದ ಗಿರಣಿ ಮಾಲೀಕ ಪ್ರಮೋದ್ ಮತ್ತು ಸಹಚರರಾದ ರಾಜು ಮತ್ತು ಸಂದೀಪ್ ಕಿರುಕುಳ ನೀಡಿದಾಗ ಆಕೆ ಪ್ರತಿಭಟಿಸಿದ್ದಾಳೆ. ರೊಚ್ಚಿಗೆದ್ದ ಆರೋಪಿಗಳು ಜಾತಿ ನಿಂದನೆ ಮಾಡಿ, ನಂತರ ಅವಳನ್ನು ಬಿಸಿ ಎಣ್ಣೆ ತುಂಬಿದ ಕಡಾಯಿಗೆ ತಳ್ಳಿದ್ದಾರೆ ಎಂದು ಆಕೆಯ ಸಹೋದರ ಹೇಳಿದ್ದಾರೆ.
ಆರೋಪಿಯು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದು, ನಿಂದಿಸಿದ ಬಳಿಕ ಬಿಸಿ ಎಣ್ಣೆಗೆ ದೂಡಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿಯ ದೇಹದ ಅರ್ಧಕ್ಕಿಂತಲೂ ಹೆಚ್ಚು ಸುಟ್ಟಗಾಯಗಳಾಗಿದ್ದು, ಆಕೆಯ ಕಾಲುಗಳು ಮತ್ತು ಕೈಗಳು ಗಂಭೀರವಾಗಿ ಸುಟ್ಟುಹೋಗಿವೆ.
ಆಕೆಯ ಸಹೋದರನ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ ಯತ್ನ ಮಹಿಳೆಯ ಮೇಲೆ ಹಲ್ಲೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಲ್ ಆಫೀಸರ್ ವಿಜಯ್ ಚೌಧರಿ ತಿಳಿಸಿದ್ದಾರೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…