ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 11 ಸ್ಥಾನಗಳಲ್ಲಿ ಝಡ್ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ.
ಎಕ್ಸಿಟ್ ಪೋಲ್ ಪ್ರಕಾರ ಕಳೆದ ಬಾರಿ 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ ಬಾರಿ ಅರ್ಧದಷ್ಟನ್ನು ದಾಟಲು ಹೆಣಗಾಡುವುದಾಗಿ ಎಲ್ಲಾ ಸಮೀಕ್ಷೆಗಳು ಭವಿಷ್ಯ ನುಡಿದಿವೆ.
ಅಂಚೆ ಮತಪತ್ರಗಳ ಲೆಕ್ಕಾಚಾರ ನಡೆಯುತ್ತಿದ್ದು, ಝಡ್ಪಿಎಂ 11 ಸ್ಥಾನಗಳಲ್ಲಿ, ಮಿಜೋ ನ್ಯಾಷನಲ್ ಫ್ರಂಟ್ (MNF) 8 ಮತ್ತು ಕಾಂಗ್ರೆಸ್ 5 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಬಾರಿ ಮಿಜೋ ನ್ಯಾಷನಲ್ ಫ್ರಂಟ್ (MNF), ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ZPM) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆಯನ್ನು ನಿರೀಕ್ಷಿಸಲಾಗಿದೆ.
ಮತ ಎಣಿಕೆಗೂ ಮುನ್ನ ಹೊರಬಿದ್ದ ಬಹುತೇಕ ಎಕ್ಸಿಟ್ ಪೋಲ್ ಗಳು ಯಾವುದೇ ಪಕ್ಷಕ್ಕೆ ಬಹುಮತ ನೀಡಿಲ್ಲ. ಎಬಿಪಿ-ಸಿ ವೋಟರ್ ಎಕ್ಸಿಟ್ ಪೋಲ್ ಪ್ರಕಾರ, ಎಂಎನ್‌ಪಿ 15 ರಿಂದ 21 ಸ್ಥಾನಗಳನ್ನು, ಕಾಂಗ್ರೆಸ್ 2 ರಿಂದ 8, ಜಿಪಿಎಂ 12 ರಿಂದ 18 ಮತ್ತು ಇತರರು 0 ರಿಂದ 5 ಸ್ಥಾನಗಳನ್ನು ಪಡೆಯುವ ನಿರೀಕ್ಷೆಯಿದೆ.
ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ಪ್ರತಿಯೊಂದು ಮಗುವಿಗೂ ಎಲ್ಲಾ ರೀತಿಯ ಅನುಭವ ಬೇಕು. ಆದರೆ ಎಲ್ಲ ಮಕ್ಕಳಿಗೂ ಅಂತಹ ಅವಕಾಶ ಒದಗಿ…
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…