ಬೆಂಗಳೂರು : ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರು ಯೂಟ್ಯೂಬ್ನಲ್ಲಿ ಹಾಡಿರುವ, ‘ಪೂಜಿಸಲೆಂದೇ ಹೂಗಳ ತಂದೆ’ ಕನ್ನಡದ ಹಾಡಿಗೆ ತಲೆದೂಗಿರುವ ಪ್ರಧಾನಿ ನರೇಂದ್ರ ಮೋದಿ, ಆ ಹಾಡಿನ ಲಿಂಕ್ ಅನ್ನು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಿ ಮುಂದೆ ಕೊಂಡೊಯ್ಯುತ್ತವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯು ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವಲ್ಲಿ ಬಹಳ ದೂರ ಸಾಗುತ್ತವೆ ಎಂದು ಅವರು ಬಣ್ಣಿಸಿದ್ದಾರೆ.
ಎರಡು ಕನಸು ಸಿನಿಮಾದ ಹಾಡು
‘ಪೂಜಿಸಲೆಂದೆ ಹೂಗಳ ತಂದೆ’ ಹಾಡು ಮೂಲತಃ ದೊರೈ-ಭಗವಾನ್ ಜೋಡಿಯಿಂದ ನಿರ್ದೇಶಿಸಲ್ಪಟ್ಟ ರಾಜ್‌ಕುಮಾರ್ ನಟನೆಯ ‘ಎರಡು ಕನಸು’ ಸಿನಿಮಾದ ಹಾಡು. ಈ ಸಿನಿಮಾ 1974 ರಲ್ಲಿ ಈ ಸಿನಿಮಾ ತೆರೆ ಕಂಡಿತ್ತು. ಹಿನ್ನೆಲೆ ಗಾಯನ ಮಾಡಿದವರು ಖ್ಯಾತ ಗಾಯಕಿ ಎಸ್ ಜಾನಕಿ ಅವರು.
ಇದೀಗ ಅದೇ ಹಾಡನ್ನು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಹಾಡಿ ಯೂಟ್ಯೂಬ್ನಲ್ಲಿ ಪ್ರಕಟಿಸಿದ್ದರು. ಇದಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.





