Mysore
20
overcast clouds

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಆಯೋಧ್ಯೆಯಲ್ಲಿ ಮೋದಿ ಹವಾ : ಬೃಹತ್‌ ರೋಡ್‌ ಶೋ

ಅಯೋಧ್ಯೆ:   ಪ್ರಧಾನಿ ಮೋದಿ ಅವರು ಇಂದು ಅಯೋಧ್ಯೆಗೆ ತೆರಳಿದ್ದು, ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಮುನ್ನ ಪ್ರಧಾನಿ ಮೋದಿ ಮೆಗಾ ರೋಡ್ ಶೋ ಆರಂಭಿಸಿದ್ದಾರೆ.

ರೈಲ್ವೆ ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣವನ್ನು ಉದ್ಘಾಟಿಸಲು ಅಯೋಧ್ಯೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ದೇಶಾದ್ಯಂತದ ವಿವಿಧ ಕಲಾವಿದರ ತಂಡಶನಿವಾರ ಸ್ವಾಗತಿಸಿದವು.

ಅಯೋಧ್ಯೆಯ ಪ್ರಮುಖ ರಸ್ತೆಯಲ್ಲಿ ಮೋದಿ ಬರೋಬ್ಬರಿ 15 ಕಿ.ಮೀ ರೋಡ್ ಶೋ ನಡೆಸಲಿದ್ದಾರೆ. ರಾಮಪತ್ ಮಾರ್ಗದ ಮೂಲಕ ಪ್ರಧಾನಿ ಮೋದಿ ರೋಡ್ ಶೋ ಸಾಗುತ್ತಿದ್ದು, ರಸ್ತೆಯ ಇಕ್ಕೆಲಗಳಲ್ಲಿ ನಿಂತು ಜನರು ಪ್ರಧಾನಿ ಮೋದಿಯನ್ನು ವೀಕ್ಷಿಸುತ್ತಿದ್ದಾರೆ. ಮೋದಿ ಜನರತ್ತ ಕೈ ಬೀಸುತ್ತಾ ರೋಡ್ ಶೋ ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲಿ ಕೇಸರಿ ಬಾವುಟಗಳು ರಾರಾಜಿಸುತ್ತಿದೆ.

15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಜಾಲನೆ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 15,700 ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಇತರ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಆರು ವಂದೇ ಭಾರತ್, ಎರಡು ಅಮೃತ್ ಭಾರತ್ ರೈಲುಗಳು ಮತ್ತು ಇತರ ರೈಲು ಯೋಜನೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಅವರು ಬೆಳಿಗ್ಗೆ 11:15 ರ ಸುಮಾರಿಗೆ ತಮ್ಮ ಭೇಟಿಯನ್ನು ಪ್ರಾರಂಭಿಸಲಿದ್ದಾರೆ. ಇತರ ನಿರ್ಣಾಯಕ ಯೋಜನೆಗಳಲ್ಲಿ ಅವರು ಅಯೋಧ್ಯೆ ವಿಮಾನ ನಿಲ್ದಾಣ, ಮಹರ್ಷಿ ವಾಲ್ಮೀಕಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ಧಾಮ್ ಜಂಕ್ಷನ್ ರೈಲ್ವೆ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ