ಮೀರತ್ : ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾಸಂಪುರದ ಲೆವೆಲ್ ಕ್ರಾಸಿಂಗ್‌ನ ಗೇಟ್‌ಗಳನ್ನು ಮುಚ್ಚಿದ್ದರೂ, ಮೂವರು ಹಳಿಗಳನ್ನು ದಾಟಲು ಮುಂದಾದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ನಗರ) ಪಿಯೂಷ್ ಕುಮಾರ್ ಸಿಂಗ್ ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನರೇಶ್ ಗಾಡಿಯನ್ನು ಕೈಯಿಂದ ಎಳೆಯುತ್ತಿದ್ದರೆ, ಅವರ ಪತ್ನಿ ಮೋನಾ ಮತ್ತು ಅವರ ಪುತ್ರಿಯರಾದ ಮನಿಶಾ (14) ಮತ್ತು ಚಾರು (7) ಗಾಡಿಯ ಹಿಂಬದಿಯಲ್ಲಿ ಕುಳಿತಿದ್ದರು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಾಸಂಪುರದ ರೈಲ್ವೆ ಕ್ರಾಸಿಂಗ್ ಬಳಿ ಹಳಿ ದಾಟುತ್ತಿದ್ದಾಗ ಸೆಮಿ-ಹೈಸ್ಪೀಡ್ ರೈಲು ಗಾಡಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಮೋನಾ ಮತ್ತು ಆಕೆಯ ಇಬ್ಬರು ಪುತ್ರಿಯರು ಹಳಿಯ ಮೇಲೆ ಬಿದ್ದಿದ್ದಾರೆ. ಅವರ ಮೇಲೆ ರೈಲು ಹರಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…