Mysore
16
few clouds

Social Media

ಶುಕ್ರವಾರ, 30 ಜನವರಿ 2026
Light
Dark

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಸಂಸದ ಕಲ್ಯಾಣ್ ಬ್ಯಾನರ್ಜಿ

ನವದೆಹಲಿ: ಸಂಸತ್ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರ ಅಮಾನತು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಇಂಡಿಯಾ ಸಂಸದರು ಪ್ರತಿಭಟನೆ ನಡೆಸಿದರು.

ಈ ಪ್ರತಿಭಟನೆ ನಡುವೆ ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ.

ಪ್ರತಿಭಟನಾನಿರತ ಸಂಸದರು ನಗುವಿನ ಅಲೆಯಲ್ಲಿ ತೇಲುತ್ತಿದ್ದು, ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

https://x.com/ANI/status/1737003611757150444?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!