Mysore
26
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮುಂಬೈ: 40 ಕೋಟಿ ರೂ. ಮೌಲ್ಯದ ಕೊಕೇನ್ ವಶ

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು (ಶುಕ್ರವಾರ) ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್​ ಸಾಗಿಸುತ್ತಿದ್ದ ಥೈಲ್ಯಾಂಡ್‌​ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಆರ್‌ಐ, ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಅಡಿಸ್ ಅಬಾಬದಿಂದ ಆಗಮಿಸಿದ ಥೈಲ್ಯಾಂಡ್‌ ಮಹಿಳೆಯನ್ನು ಬಂಧಿಸಿದ್ದಾರೆ.

ಮಹಿಳೆಗೆ ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಕಂಡು ಬಂದಿರಲಿಲ್ಲ. ನಂತರ ಅವರ ಟ್ರಾಲಿ ಬ್ಯಾಗ್​ನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಬಿಳಿ ಪುಡಿಯಂತಹ ವಸ್ತುವನ್ನು ಹೊಂದಿರುವ ಅನೇಕ ಪ್ಯಾಕೆಟ್​ಗಳು ಕಂಡುಬಂದಿದ್ದು, ಅವುಗಳೆಲ್ಲಾ ಕೊಕೇನ್​ ಎಂಬುದು ದೃಢಪಟ್ಟಿದೆ. ಇವುಗಳ ಅಂದಾಜು ಮೊತ್ತ 40 ಕೋಟಿಗಳಷ್ಟು ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.

ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.

ಡಿಸೆಂಬರ್​ 20ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ 20 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!