ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು (ಶುಕ್ರವಾರ) ಸುಮಾರು 40 ಕೋಟಿ ರೂ. ಮೌಲ್ಯದ ಕೊಕೇನ್ ಸಾಗಿಸುತ್ತಿದ್ದ ಥೈಲ್ಯಾಂಡ್ ಮಹಿಳೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಡಿಆರ್‌ಐ, ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ಅಡಿಸ್ ಅಬಾಬದಿಂದ ಆಗಮಿಸಿದ ಥೈಲ್ಯಾಂಡ್ ಮಹಿಳೆಯನ್ನು ಬಂಧಿಸಿದ್ದಾರೆ.
ಮಹಿಳೆಗೆ ಪರೀಕ್ಷೆ ಮಾಡಿದಾಗ ಯಾವುದೇ ಅನುಮಾನ ಕಂಡು ಬಂದಿರಲಿಲ್ಲ. ನಂತರ ಅವರ ಟ್ರಾಲಿ ಬ್ಯಾಗ್ನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಬಿಳಿ ಪುಡಿಯಂತಹ ವಸ್ತುವನ್ನು ಹೊಂದಿರುವ ಅನೇಕ ಪ್ಯಾಕೆಟ್ಗಳು ಕಂಡುಬಂದಿದ್ದು, ಅವುಗಳೆಲ್ಲಾ ಕೊಕೇನ್ ಎಂಬುದು ದೃಢಪಟ್ಟಿದೆ. ಇವುಗಳ ಅಂದಾಜು ಮೊತ್ತ 40 ಕೋಟಿಗಳಷ್ಟು ಅಂತಾರಾಷ್ಟ್ರೀಯ ಮಾರುಕಟ್ಟೆ ಮೌಲ್ಯವನ್ನು ಹೊಂದಿದೆ.
ಬಂಧಿತ ಮಹಿಳೆಯ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್ (ಎನ್‌ಡಿಪಿಎಸ್) ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.
ಡಿಸೆಂಬರ್ 20ರಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ವಿದೇಶದಿಂದ ಸಾಗಿಸುತ್ತಿದ್ದ 20 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಿದ್ದರು.
ನವೀನ್ ಡಿಸೋಜ ಜಿಲ್ಲೆಯಲ್ಲಿ ಸು.೧೭೪,೧೧೪ ಕುಟುಂಬಗಳು, ಗಣತಿ ಕಾರ್ಯಕ್ಕೆ ಗುರುತು, ೭,೩೭೯ ಕುಟುಂಬಗಳಿಂದ ಸ್ವಯಂ ಗಣತಿ ಮಡಿಕೇರಿ: ನಮ್ಮ ಗಣತಿ,…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆಯಲ್ಲಿ ೩೫ರಿಂದ ೪೦ ಡಿಗ್ರಿ ಉಷ್ಣಾಂಶ, ಬಿಸಿಗಾಳಿಗೆ ಹೈರಾಣಾದ ಜನರು ಗುಂಡ್ಲುಪೇಟೆ: ಬೇಸಿಗೆಯ ಬಿಸಿಲಿನ ತಾಪ ದಿನೇದಿನೇ…
ಮಧುಕರ ಮಳವಳ್ಳಿ (ಈ ಲೇಖನಕ್ಕೆ ಕೃತಕ ಬುದ್ಧಿಮತ್ತೆಯ ಚಿತ್ರ ಬಳಸಲಾಗಿದೆ) ಹಬ್ಬಕ್ಕೆ ಯಾರಿಗೆ ತಾನೆ ಹೊಸ ಬಟ್ಟೆ ಇಷ್ಟ ಇಲ್ಲ…
ಭಾರತಿ ಬಿ.ವಿ. ಅವನೆದುರು ಮಾನ ತೆಗೆದ ಸೈಕಲ್ಲಿನ ಸಹವಾಸ ನನಗೆ ಮತ್ತೆ ಬೇಕೆನ್ನಿಸಲಿಲ್ಲ ನಾವೆಲ್ಲ ‘ನಟರಾಜ ಸರ್ವೀಸ್’ನಲ್ಲೇ ಬದುಕು ಕಳೆದವರು.…
ಶುಭಾ ಖಟಾವಕರ ಮ್ಹೆತ್ರಸ್ ನೇಪಾಳದ ಕನಸುಗಣ್ಣಿನ ಯುವಜನಾಂಗದ ಈ ಹೊಸ ಸರ್ಕಾರ ಈಗ ಇಟ್ಟಿರುವ ಹೆಜ್ಜೆಗಳು ಯಶಸ್ವಿಯಾದರೆ ದಕ್ಷಿಣ ಏಷ್ಯಾದಲ್ಲಿ…
ಪಂಪ ಪ್ರಶಸ್ತಿ ಪಡೆಯುತ್ತಿರುವ ಮಹಾದೇವರಿಗೆ ಎಲ್ಲಾ ಮನೆಗಳ ಜೋತಮ್ಮದೀರು ಹರಸಲಿ ರಾಜೇಂದ್ರ ಚೆನ್ನಿ ೧ ತಮ್ಮ ಒಟ್ಟು ಬರಹಗಳು ಇಷ್ಟು ಕಡಿಮೆ…