ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ ಅಭ್ಯರ್ಥಿ ಹಾಕುತ್ತಿದ್ದಾರೆ ಎಂದು ಆರೋಪಿಸಿದ್ದ ರಾಹುಲ್ ಗಾಂಧಿಗೆ ತಿರುಗೇಟು ನೀಡಿದ್ದಾರೆ.
ಗಾಂಧಿಯವರು ತಮ್ಮ ಧಾರ್ಮಿಕ ಗುರುತಿನ ಮೇಲಿನ ದ್ವೇಷದಿಂದ ತಮ್ಮ ವಿರುದ್ಧ ಇಂತಹ ಆರೋಪ ಮಾಡಿದ್ದಾರೆ. ರಾಹುಲ್ ಗಾಂಧಿ, ನನ್ನ ಹೆಸರು ಅಸಾದುದ್ದೀನ್ ಎಂಬ ಕಾರಣಕ್ಕೆ ನೀವು ಈ ಆರೋಪಗಳನ್ನು ಮಾಡುತ್ತಿದ್ದೀರಿ. ನನ್ನ ಮುಖದ ಮೇಲೆ ಗಡ್ಡ ಇರುವುದರಿಂದ ಮತ್ತು ಸ್ಕಲ್ ಕ್ಯಾಪ್ ಹಾಕಿಕೊಂಡಿರುವುದರಿಂದ ನನ್ನ ವಿರುದ್ಧ ಹಣ ಪಡೆದಿರುವ ಆರೋಪಗಳನ್ನು ಮಾಡುತ್ತಿದ್ದೀರಿ ಎಂದಿದ್ದಾರೆ.
ಹೈದರಾಬಾದ್‌ನಲ್ಲಿ ಸಾರ್ವಜನಿಕ ಭಾಷಣ ಮಾಡಿದ ಓವೈಸಿ, ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ನಾವು ಎಲ್ಲಿಯೇ ಚುನಾವಣೆ ಎದುರಿಸಲು ಹೋದರೂ ಅಲ್ಲಿ ಬಿಜೆಪಿಯಿಂದ ಹಣ ಪಡೆಯಲಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಸ್ಸಾಂ, ಮಧ್ಯಪ್ರದೇಶ, ರಾಜಸ್ಥಾನ, ಮಹಾರಾಷ್ಟ್ರ, ತ್ರಿಪುರಾ, ಬಿಜೆಪಿಯೊಂದಿಗೆ ಕಾಂಗ್ರೆಸ್ ಪಕ್ಷವು ಎಲ್ಲೇ ಹೋರಾಡುತ್ತದೆಯೋ ಅಲ್ಲಿ ಎಂಐಎಂ ಪಕ್ಷವು ಬಿಜೆಪಿಯಿಂದ ಹಣ ಪಡೆದು ಅಭ್ಯರ್ಥಿಗಳನ್ನು ಹಾಕುತ್ತಿದೆ ಎಂದು ಹೇಳುತ್ತಿದ್ದಾರೆ. ಆದರೆ ರಾಹುಲ್ ಯಾರೋ ಬರೆದುಕೊಟ್ಟಿದ್ದನ್ನು ಗಿಳಿಯಂತೆ ಓದುತ್ತಿದ್ದಾರೆ ಎಂದು ಕುಟುಕಿದರು.
2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಅಮೇಥಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸೋಲಲು ನೀವು ಎಷ್ಟು ಹಣವನ್ನು ತೆಗೆದುಕೊಂಡಿದ್ದೀರಿ. 2014 ಮತ್ತು 2019ರ ಚುನಾವಣೆಯಲ್ಲಿ ಸೋಲಲು ನೀವು ಬಿಜೆಪಿಯಿಂದ ಹಣ ತೆಗೆದುಕೊಂಡಿದ್ದೀರಾ? ಎಂದು ರಾಹುಲ್‌ಗೆ ಪ್ರಶ್ನಿಸಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್‌ಪೆಕ್ಟರ್‌ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…