ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಈ ಪ್ರವಾಸದ ಕುರಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಈ ಪ್ರವಾಸವನ್ನು ಕೈಗೊಂಡಿದ್ದು, ಲಕ್ಷದ್ವೀಪಕ್ಕೆ 1150 ಕೋಟಿ ರೂಪಾಯಿಗಳ ಯೋಜನೆಯನ್ನೂ ಸಹ ಘೋಷಿಸಿದ್ದಾರೆ. ಬಳಿಕ ಲಕ್ಷದ್ವೀಪದ ಸಮುದ್ರ ತೀರದಲ್ಲಿ ತಿರುಗಾಡಿರುವ ಮೋದಿ ಸಮುದ್ರ ಸೌಂದರ್ಯವನ್ನು ಸವಿದಿದ್ದಾರೆ.
ಅಲ್ಲದೇ ನರೇಂದ್ರ ಮೋದಿ ಸ್ನಾರ್ಕಲಿಂಗ್ ಅನ್ನೂ ಸಹ ಮಾಡಿದ್ದಾರೆ. ಸ್ನಾರ್ಕಲ್ ಎಂಬ ಟ್ಯೂಬ್ ಮೂಲಕ ಉಸಿರಾಡುತ್ತಾ ಸಮುದ್ರದಾಳಕ್ಕೆ ಲೈಫ್ ಜಾಕೆಟ್ ಧರಿಸಿ ಇಳಿದು ಒಳಗಿನ ಸೌಂದರ್ಯವನ್ನು ಸವಿಯುವ ಪ್ರಕ್ರಿಯೆಗೆ ಸ್ನಾರ್ಕಲಿಂಗ್ ಎಂದು ಕರೆಯಲಾಗುತ್ತದೆ. ಈ ಸಾಹಸ ಮಾಡಿರುವ ಮೋದಿ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ವಯಸ್ಸಿನಲ್ಲೂ ಇಂತಹ ಚಟುವಟಿಕೆ ಮಾಡಿರುವುದಕ್ಕೆ ಭೇಷ್ ಎಂದಿದ್ದಾರೆ.
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…