ಇಂದು ( ಡಿಸೆಂಬರ್ 30 ) ಅಯೋಧ್ಯೆಗೆ ಭೇಟಿ ನೀಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಲ್ಲಿನ ನೂತನ ರೈಲು ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳನ್ನು ಉದ್ಘಾಟಿಸಿದ್ದಾರೆ. ರೈಲು ನಿಲ್ದಾಣದ ಉದ್ಘಾಟನೆ ವೇಳೆ ಎರಡು ವಿಶೇಷ ಅಮೃತ್ ರೈಲು ಹಾಗೂ 6 ಹೊಸ ವಂದೇ ಭಾರತ್ ರೈಲುಗಳಿಗೆ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಅಮೃತ್ ರೈಲುಗಳಿಗೆ ಚಾಲನೆ ನೀಡಿದ ನರೇಂದ್ರ ಮೋದಿ ದೇಶದ ವಿವಿಧ ಹೊಸ ವಂದೇ ಭಾರತ್ ರೈಲುಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಪೈಕಿ ರಾಜ್ಯಕ್ಕೆ ಎರಡು ವಂದೇ ಭಾರತ್ ರೈಲುಗಳು ಲಭಿಸಿದ್ದು, ಒಂದು ರೈಲು ಮಂಗಳೂರು ಹಾಗೂ ಮಡಗಾವ್‌ಗಳ ನಡುವೆ ಸಂಪರ್ಕ ಕಲ್ಪಿಸಿದರೆ, ಮತ್ತೊಂದು ರೈಲು ಬೆಂಗಳೂರು ಹಾಗೂ ಕೊಯಮತ್ತೂರು ನಡುವೆ ಸಂಚರಿಸಲಿದೆ.
ಬೆಳಗ್ಗೆ 5 ಗಂಟೆಗೆ ಕೊಯಮತ್ತೂರಿನಿಂದ ಹೊರಡಲಿರುವ ರೈಲು 11.30ಕ್ಕೆ ಬೆಂಗಳೂರು ತಲುಪಲಿದ್ದು, ಮತ್ತೆ ಮಧ್ಯಾಹ್ನ 1.40ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 8 ಗಂಟೆಗೆ ಕೊಯಮತ್ತೂರನ್ನು ತಲುಪಲಿದೆ. ಇನ್ನು ಮಂಗಳೂರು – ಮಡಗಾವ್ ರೈಲು ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ಹೊರಟು ಗೋವಾದ ಮಡಗಾವ್‌ಗೆ 1.15ಕ್ಕೆ ತಲುಪಲಿದ್ದು, ಸಂಜೆ 6.10ಕ್ಕೆ ಮಡಗಾವ್‌ನಿಂದ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣವನ್ನು ತಲುಪಲಿದೆ.
ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್ ಮತ್ತು ಸಿಪಿಎಂ…
ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…
ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…
ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…
ರೋಮ್ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…
ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…