ಉದ್ಯಮಿ ಮುಕೇಶ್ ಅಂಬಾನಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಗುಣಗಾನ ಮಾಡಿದ್ದಾರೆ. ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಭಾರತ ದೇಶದ ಅತ್ಯಂತ ಯಶಸ್ವಿ ಪ್ರಧಾನಿ ಎಂದು ಹೊಗಳಿದ್ದಾರೆ.
ಅಲ್ಲದೇ ಈ ಕಾಲದ ಶ್ರೇಷ್ಠ ಜಾಗತಿಕ ನಾಯಕರಾಗಿ ನರೇಂದ್ರ ಮೋದಿ ಹೊರಹೊಮ್ಮಿದ್ದಾರೆ ಎಂದೂ ಸಹ ಅಂಬಾನಿ ಅಭಿಪ್ರಾಯಪಟ್ಟಿದ್ದಾರೆ. ವೈಬ್ರೆಂಟ್ ಗುಜರಾತ್ ಸಮ್ಮಿಟ್ 20 ವರ್ಷ ಕಾಲ ಮುಂದುವರಿಯಲು ಅವರೇ ಕಾರಣ, ಗುಜರಾತ್ ಹೊಂದಿರುವ ಬೆಳವಣಿಗೆಗೂ ಸಹ ಮೋದಿ ಅವರೇ ಕಾರಣ ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದಾರೆ.
“ಈ ರೀತಿಯ ಬೇರೆ ಯಾವುದೇ ಶೃಂಗಸಭೆ ಕೂಡ ಸುದೀರ್ಘ 20 ವರ್ಷ ಕಾಲ ಬಲವೃದ್ಧಿ ಕಾಣುತ್ತಾ ಮುಂದುವರಿಯುತ್ತಿರುವ ಉದಾಹರಣೆಯೇ ಇಲ್ಲ. ನಮ್ಮ ಪ್ರಧಾನಿ ಶ್ರೀ ನರೇಂದ್ರಭಾಯ್ ಮೋದಿ ಅವರ ದೃಷ್ಟಿ ಮತ್ತು ಸ್ಥಿರತೆಗೆ ಇದು ನಿದರ್ಶನವಾಗಿದೆ” ಎಂದು ಮುಕೇಶ್ ಅಂಬಾನಿ ತಿಳಿಸಿದ್ದಾರೆ.
“ಭಾರತ 2047ರೊಳಗೆ 35 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗುವ ಹಾದಿಯಲ್ಲಿದೆ. ಜಗತ್ತಿನ ಯಾವ ಶಕ್ತಿಯೂ ಇದನ್ನು ನಿಲ್ಲಿಸಲು ಆಗುವುದಿಲ್ಲ. ಗುಜರಾತ್ ರಾಜ್ಯವೊಂದರ ಆರ್ಥಿಕತೆಯೇ 3 ಟ್ರಿಲಿಯನ್ ಡಾಲರ್ನಷ್ಟು ಆಗುತ್ತದೆ” ಎಂದೂ ಸಹ ಮುಕೇಶ್ ಅಂಬಾನಿ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…
ಮಂಡ್ಯ: ಹೆಣ್ಣು ಕಾನೂನು ಅರಿತಕೊಂಡಾಗಷ್ಟೇ, ಹೆಣ್ಣಿನ ಮೇಲಾಗುತ್ತಿರುವ ದೌರ್ಜನ್ಯ ಎದುರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ…
ಮೈಸೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಸಾವನ್ನಪ್ಪಿರುವ…
ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ತಮ್ಮ ಮದುವೆ ಕರೆಯೋಲೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಅವರಿಗೆ ನೀಡಿ…
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ…
ಬೆಳಗಾವಿ: ಎಂಎಲ್ಸಿ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪೊಲೀಸರ ವಿರುದ್ಧ ಫೇಕ್ ಎನ್ಕೌಂಟರ್ ಹೇಳಿಕೆ…