ಬಜೆಟ್ ಅಧಿವೇಶನದ ರಾಜ್ಯಸಭೆ ಕಲಾಪದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಂಗ್ರೆಸ್ ಪಕ್ಷದ ವಿರುದ್ಧ ಕಡು ಟೀಕೆ ಮಾಡಿದ್ದಾರೆ.
ತಮ್ಮ ಅಧಿಕಾರದ ಸರ್ಕಾರದ ಕಳೆದ ಹತ್ತು ವರ್ಷಗಳಿಗೂ ಹಾಗೂ ಕಾಂಗ್ರೆಸ್ ಸರ್ಕಾರದ ಆಡಳಿತದ ಕೊನೆಯ ಹತ್ತು ವರ್ಷಗಳಿಗೂ ಹೋಲಿಕೆ ಮಾಡಿದ ಮೋದಿ ತಮ್ಮ ಅವಧಿಯನ್ನು ಜನರು ದೊಡ್ಡ ಹಾಗೂ ದೃಢ ನಿರ್ಧಾರಗಳಿಗಾಗಿ ನೆನಪಿಸಿಕೊಳ್ಳುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷ ಒಂದು ಕುಟುಂಬದ ಹಿಡಿತದಲ್ಲಿ ಸಿಲುಕಿತ್ತು ಎಂದು ಆರೋಪಿಸಿದ ಮೋದಿ ಅಧಿಕಾರದ ದಾಹವನ್ನೊಂದಿತ್ತು ಎಂದಿದ್ದಾರೆ. ಅಲ್ಲದೇ ಕಾಂಗ್ರೆಸ್ ಬಹಿರಂಗವಾಗಿ ಪ್ರಜಾಪ್ರಭುತ್ವದ ಕತ್ತು ಹಿಸುಕಿತ್ತು. ರಾತ್ರೋರಾತ್ರಿ ಪ್ರಜಾಸತ್ತಾತ್ಮಕವಾಗಿ ಅಧಿಕಾರ ಹಿಡಿದಿದ್ದ ಸರ್ಕಾರಗಳನ್ನು ವಿಸರ್ಜಿಸಿತ್ತು. ಸಂವಿಧಾನ ಶಿಷ್ಟಾಚಾರಗಳನ್ನು ಜೈಲಿಗೆ ಹಾಕಿ ಪತ್ರಿಕೆಗಳಿಗೆ ಬೀಗ ಹಾಕುವ ಯತ್ನ ಮಾಡಿತ್ತು ಎಂದರು.
ಇಷ್ಟು ಮಾತ್ರವಲ್ಲದೇ ಇದೀಗ ದಕ್ಷಿಣ ಹಾಗೂ ಉತ್ತರ ಎಂದು ದೇಶ ಒಡೆಯುವ ಕೆಲಸಕ್ಕೆ ಕೈಹಾಕಿರುವ ಕಾಂಗ್ರೆಸ್ ನಮಗೆ ಪ್ರಜಾಪ್ರಭುತ್ವ ಹಾಗೂ ಒಕ್ಕೂಟ ವ್ಯವಸ್ಥೆಯ ಪಾಠ ಮಾಡುತ್ತಿದೆ ಎಂದು ಕಾಲೆಳೆದರು. ಕಾಂಗ್ರೆಸ್ ಸರ್ಕಾರ ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡಲಿಲ್ಲ. ಸಾಮಾನ್ಯ ವರ್ಗದ ಜನರಿಗೆ ಮೀಸಲಾತಿ ನೀಡದ ಕಾಂಗ್ರೆಸ್ ಅಂಬೇಡ್ಕರ್‌ಗೆ ಭಾರತ ರತ್ನ ನೀಡಲಿಲ್ಲ. ಬದಲಾಗಿ ತಮ್ಮ ಕುಟುಂಬಕ್ಕೆ ಮಾತ್ರ ಭಾರತ ರತ್ನವನ್ನು ನೀಡುತ್ತಲೇ ಬಂದಿದೆ. ನಾಯಕರಾಗಿ ಯಾವುದೇ ಗ್ಯಾರಂಟಿ ಇಲ್ಲದವರು ಮೋದಿ ಖಾತರಿ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ ಎಂದು ಮೋದಿ ಕಿಡಿಕಾರಿದ್ದಾರೆ.
ಇನ್ನು ಜನಹರಲಾಲ್ ನೆಹರೂ ಬಗ್ಗೆ ಮಾತನಾಡಿದ ಮೋದಿ ʼನೆಹರೂ ಒಮ್ಮೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಅದರಲ್ಲಿ ಮೀಸಲಾತಿಗೆ ವಿರೋಧಿ ಹೇಳಿಕೆಗಳನ್ನು ನೀಡಿದ್ದರು. ಮೀಸಲಾತಿ ಆಡಳಿತ ವ್ಯವಸ್ಥೆಯಲ್ಲಿ ದಕ್ಷತೆಯನ್ನು ಕುಂಟಿಗೊಳಿಸುವಂತೆ ಮಾಡುತ್ತದೆ. ಅರ್ಹತೆ ಇಲ್ಲದವರನ್ನು ಅಧಿಕಾರಕ್ಕೆ ತರುತ್ತದೆ ಎಂದು ಬರೆದಿದ್ದರುʼ ಎಂದು ಹೇಳಿದರು.
ಎಸ್‌ಟಿ, ಎಸ್‌ಟಿ ಹಾಗೂ ಒಬಿಸಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ದೊರೆತರೆ ಸರ್ಕಾರದ ಕೆಲಸದ ಗುಣಮಟ್ಟ ಕುಸಿಯುತ್ತದೆ ಎಂದು ನೆಹರೂ ಹೇಳುತ್ತಿದ್ದರು. ನೇಮಕಾತಿಗಳನ್ನೂ ಸಹ ನಿಲ್ಲಿಸಿದ್ದರು. ಇಂತಹ ಉದಾಹರಣೆಗಳು ಕಾಂಗ್ರೆಸ್ ಮನಸ್ಥಿತಿ ಎಂಥಹದ್ದು ಎಂಬುದನ್ನು ತೋರಿಸುತ್ತದೆ. ಕಾಂಗ್ರೆಸ್ ಯಾವಾಗಲೂ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ. ನಾವು ಹಿಂದುಳಿದ ವರ್ಗಗಳಿಗೆ ಯಾವಾಗಲೂ ಆದ್ಯತೆ ನೀಡಿದ್ದೇವೆ ಎಂದರು. ಈ ವೇಳೆ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಿದ್ದು ತಮ್ಮ ಸರ್ಕಾರ ಎಂದೂ ಸಹ ಮೋದಿ ಉಲ್ಲೇಖಿಸಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…