ಸಂಸತ್‌ನಲ್ಲಿ ಉಂಟಾಗಿದ್ದ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸಿ ಅಮಾನತ್ತಾಗಿದ್ದ 146 ಸಂಸದರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಾರ್ನಿಂಗ್ ನೀಡಿದ್ದಾರೆ. ಇಂದಿನಿಂದ ( ಜನವರಿ 31 ) ಬಜೆಟ್ ಅಧಿವೇಶನ ಆರಂಭಗೊಂಡಿದ್ದು, ಮೊದಲ ದಿನವೇ ಮೋದಿ ಅಮಾನತ್ತಾಗಿದ್ದ ಸಂಸದರಿಗೆ ಬುದ್ಧಿ ಮಾತನ್ನು ಹೇಳಿ ಎಚ್ಚರಿಕೆ ನೀಡಿದ್ದಾರೆ.
ಸಂಸತ್‌ಗೆ ಧನಾತ್ಮಕವಾಗಿ ಕೊಡುಗೆ ನೀಡಿದವರನ್ನು ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಹೊರತು ದಾಂಧಲೆ ನಡೆಸಿದವರನ್ನು ನೆನಪು ಮಾಡಿಕೊಳ್ಳುವುದು ಕಡಿಮೆ. ಹೀಗಾಗಿ ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸಂಸದರಿಗೆ ಧನಾತ್ಮಕ ಹೆಜ್ಜೆ ಇಡಲು ಅವಕಾಶ ಸಿಕ್ಕಿದೆ. ಅದನ್ನು ಅತ್ಯುತ್ತಮವಾಗಿ ಹಾಗೂ ಧನಾತ್ಮಕವಾಗಿ ಬಳಸಿಕೊಳ್ಳಬೇಕು, ಕೈಚೆಲ್ಲಬಾರದು ಎಂದು ಕರೆ ನೀಡಿದ್ದಾರೆ.
ಸಂಸದೀಯ ಮೌಲ್ಯಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಭಗ್ನಗೊಳಿಸುವ ಹವ್ಯಾಸ ಇರುವ ಸಂಸದರು ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಸಂಸತ್ ಅವಧಿಯಲ್ಲಿ ತಾವು ಏನೆಲ್ಲಾ ಮಾಡಿದ್ದೇವೆ ಎಂಬುದರ ಸಿಂಹಾವಲೋಕನ ಮಾಡಿಕೊಳ್ಳಬೇಕು ಎಂದೂ ಸಹ ಪ್ರಧಾನಮಂತ್ರಿ ಹೇಳಿಕೆ ನೀಡಿದ್ದಾರೆ.
ಇನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕುರಿತು ಮಾತನಾಡಿದ ಮೋದಿ ಬಜೆಟ್ ಅಧಿವೇಶನ ಪ್ರಾರಂಭವಾದಾಗ ಮುರ್ಮು ಅವರ ಮಾರ್ಗದರ್ಶನ ಹಾಗೂ ನಾಳೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸುವಾಗ ಒಂದು ರೀತಿಯಲ್ಲಿ ಇದು ನಾರಿ ಶಕ್ತಿಯ ಹಬ್ಬವಾಗಲಿದೆ ಎಂದು ಬಣ್ಣಿಸಿದರು.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…