ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು.
ಈ ಆರೋಪಕ್ಕೆ ಟಾಂಗ್ ನೀಡಲು ಯತ್ನಿಸಿರುವ ರಾಹುಲ್ ಗಾಂಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ಒಬಿಸಿ ವರ್ಗದಲ್ಲಿ ಹುಟ್ಟಿಲ್ಲ ಎಂದು ಹೇಳಿಕೆ ನೀಡಿ ಗಂಭೀರ ಆರೋಪವನ್ನು ಮಾಡಿದ್ದಾರೆ. ಒಡಿಶಾದಲ್ಲಿ ಭಾರತ್ ಜೋಡ್ ನ್ಯಾಯ್ ಯಾತ್ರೆಯ ಮೂರನೇ ದಿನದಂದು ಮಾತನಾಡಿದ ರಾಹುಲ್ ಗಾಂಧಿ ʼಪ್ರಧಾನಮಂತ್ರಿ ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ. ಗುಜರಾತ್‌ನಲ್ಲಿ ತೇಲಿ ಎಂಬ ಜಾತಿಯಲ್ಲಿ ಅವರು ಜನಿಸಿದರು. ಆ ಸಮುದಾಯಕ್ಕೆ 2000ರಲ್ಲಿ ಬಿಜೆಪಿ ಒಬಿಸಿ ಎಂಬ ಟ್ಯಾಗ್ ಅನ್ನು ನೀಡಿತು. ಅವರು ಸಾಮಾನ್ಯ ಜಾತಿಯಲ್ಲಿ ಜನಿಸಿದ್ದಾರೆ. ಅವರು ಒಬಿಸಿ ಕೆಟಗರಿಯಲ್ಲಿ ಹುಟ್ಟಿಲ್ಲ ಹಾಗೂ ಸಾಮಾನ್ಯ ಜಾತಿಯಲ್ಲಿ ಜನಿಸಿರುವ ಕಾರಣದಿಂದಲೇ ತಮ್ಮ ಸಂಪೂರ್ಣ ಜೀವನದಲ್ಲಿ ಜಾತಿಗಣತಿ ಮಾಡಲು ಬಿಡುವುದಿಲ್ಲ” ಎಂದು ಆರೋಪಿಸಿದರು.
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…
ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …