ನವದೆಹಲಿ : ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ರಾಷ್ಟ್ರೀಯ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕುಗಳ ಒಕ್ಕೂಟದ ವತಿಯಿಂದ ದೆಹಲಿಯಲ್ಲಿಂದು ರಾಷ್ಟ್ರೀಯ ಸಹಕಾರ ಸಮ್ಮೇಳನ ಆಯೋಜಿಸಲಾಗಿದೆ.
ಕೇಂದ್ರ ಗೃಹ ವ್ಯವಹಾರಗಳು ಹಾಗೂ ಸಹಕಾರ ಸಚಿವ ಅಮಿತ್ ಷಾ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಕರ್ನಾಟಕ, ಕೇರಳ, ಗುಜರಾತ್ ಮತ್ತು ಪಶ್ಚಿಮ ಬಂಗಾಳದಲ್ಲಿ ಸಾಲ ನೀಡುವಿಕೆ, ವಸೂಲಾತಿ ಮತ್ತು ಇತರೆ ವಲಯಗಳಲ್ಲಿ ಸಾಧನೆ ಮಾಡಿರುವುದನ್ನು ಪರಿಗಣಿಸಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 90 ವರ್ಷಗಳಿಗೂ ಅಧಿಕ ಕಾಲದಿಂದಲೂ ಗ್ರಾಮೀಣ ವಲಯದಲ್ಲಿ ಅವಿರಿತವಾಗಿ ಸೇವೆ ಸಲ್ಲಿಸುತ್ತಿರುವ ನಾಲ್ಕು ಎ ಆರ್ ಡಿ ಬಿ ಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.