ನವದೆಹಲಿ : ಕೇಂದ್ರ ಬಜೆಟ್ನಲ್ಲಿ ಘೋಷಿಸಿರುವ ಜನಪರ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಬಿಜೆಪಿ 12 ದಿನಗಳ ರಾಷ್ಟ್ರವ್ಯಾಪಿ ಅಭಿಯಾನ ಪ್ರಾರಂಭಿಸಲಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಈ ಅಭಿಯಾನವನ್ನು ಬಿಜೆಪಿಯ ಹಿರಿಯ ನಾಯಕ ಸುಶೀಲ್ ಮೋದಿ ಸಂಯೋಜಿಸಲಿದ್ದು, ಫೆ.12 ರಂದು ಮುಕ್ತಾಯಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಮತ್ತು ರೈತ ಮತ್ತು ಯುವ ಘಟಕಗಳ ಮುಖ್ಯಸ್ಥರು ಸೇರಿದಂತೆ ಒಂಬತ್ತು ಸದಸ್ಯರನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ.
ಅಭಿಯಾನದ ಭಾಗವಾಗಿ ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿದರೆ, ಪಕ್ಷವು ಅಧಿಕಾರದಲ್ಲಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಘಟಕದ ಮುಖ್ಯಸ್ಥರು ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕರು ಪತ್ರಿಕಾಗೋಷ್ಠಿಗಳನ್ನು ನಡೆಸಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ. ದೇಶದ 50 ಪ್ರಮುಖ ನಗರಗಳಲ್ಲಿ ನರೇಂದ್ರ ಮೋದಿ ಸರ್ಕಾರದ ಸಚಿವರು ಪತ್ರಿಕಾಗೋಷ್ಠಿ ನಡೆಸಿ ಬಜೆಟ್ ನಲ್ಲಿ ಘೋಷಿಸಿದ ಜನಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.