ಪ್ರಧಾನಿ ಮೋದಿಗೆ ಕೃತಜ್ಞತೆ ಸಲ್ಲಿಸಿದ ದ್ರೌಪದಿ ಮುರ್ಮು

ನವದೆಹಲಿ :  ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ತಮ್ಮನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಪ್ರಧಾನಿ ಮೋದಿಗೆ ದ್ರೌಪದಿ ಮುರ್ಮು ಕೃತಜ್ಞತೆ ಸಲ್ಲಿಸಿದರು.

ದ್ರೌಪದಿ ಮುರ್ಮು ಅವರನ್ನು ಖುಷಿಯಿಂದ ಬರ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು, ಹೂಗುಚ್ಛ ನೀಡಿ ಅಭಿನಂದಿಸಿದರು. ನಂತರ ಇಬ್ಬರು ಕೆಲಕಾಲ ಚುನಾವಣೆ ಬಗ್ಗೆ ಚರ್ಚೆ ನಡೆಸಿದರು. ಎಲ್ಲೆಡೆಯಿಂದ ವ್ಯಕ್ತವಾಗುತ್ತಿರುವ ಬೆಂಬಲದ ಬಗ್ಗೆ ದ್ರೌಪದಿ ಮುರ್ಮು ಸಂತಸ ವ್ಯಕ್ತಪಡಿಸಿದರು.